ಬೆಂಗಳೂರು
ರಾಜ್ಯದಲ್ಲಿ ಕರೋನ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮತ್ತಷ್ಟು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿಯವರು ಸೂಚಿಸಿದ್ದಾರೆ ಎಂದರು. ಆದರೆ ಮತ್ತೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ಹೇಳಿದರು.
ಈ ಮೂಲಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನುವ ಊಹಾಪೋಹಗಳಿಗೆ ತೆರೆ ಸಚಿವರು ಎಳೆದಿದ್ದಾರೆ.ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ವಿಡಿಯೋ ಕಾನ್ಫರೆನ್ಸ್ ಸಮಯದಲ್ಲಿ ಈ ವಿಷಯ ಯಾರ ಕಡೆಯಿಂದಲೂ ಪ್ರಸ್ತಾಪವಾಗಲಿಲ್ಲ ಎಂದರು.
ಮುಖ್ಯಮಂತ್ರಿ, ಮೋದಿಯವರೊಂದಿಗಿನ ಮಾತುಕತೆಯ ಸಮಯದಲ್ಲಿ, ಆಮ್ಲಜನಕದ ಪೂರೈಕೆಯ ಬಗ್ಗೆ ಮಾತ್ರ ಕಳವಳ ವ್ಯಕ್ತಪಡಿಸಲಾಗಿದೆ ಮತ್ತು ಹೊಸ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಕೇಂದ್ರವನ್ನು ಕೋರಲಾಗಿದೆ ಎಂದರು.
ಅಧಿಕೃತ ಮೂಲಗಳ ಪ್ರಕಾರ, ರಾಜ್ಯದಲ್ಲಿ ಕರೋನ ಸೋಂಕಿತರ ಸಂಖ್ಯೆ 5.40 ಲಕ್ಷ ದಾಟಿದೆ ಮತ್ತು ಸಾವಿನ ಸಂಖ್ಯೆ 8 ಸಾವಿರದ 266 ಕ್ಕೆ ಏರಿಕೆಯಾಗಿದೆ ಎಂದೂ ಸಚಿವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
