ಬೆಂಗಳೂರು
ಕೊರೊನಾ ಹೆಮ್ಮಾರಿಯ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆಯಾದರೂ ಇದರಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ಸಾರ್ವಜನಿಕರ ಹಣ ಲೋಪವಾಗಿದೆ ಎಂದು ದೂರು ಬಂದಿದೆ. ಈ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಕೊರೊನಾ ಕಾರ್ಯಕ್ರಮಗಳ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದು, ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಪರಿಶೀಲನೆ ನಡೆಸಲು ಭೇಟಿ ನೀಡಲು ಸಭೆ ನಿರ್ಧರಿಸಿರುವುದಾಗಿ ಹೇಳಿದರು.ಕೋವಿಡ್ ಚಿಕಿತ್ಸೆಗೆ ಖರೀದಿಸಲಾದ ವೈದ್ಯಕೀಯ ಉಪಕರಣ, ಡ್ರಗ್ಸ್, ಪಿಪಿಇ ಕಿಟ್, ಕೊರೊನಾ ತಪಾಸಣಾ ಕಿಟ್‍ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ವಿಚಾರವಾಗಿ ವರದಿ ಕೇಳಿದ್ದೇವೆ. ವರದಿ ಶೀಘ್ರವಾಗಿ ಬರುವ ನಿರೀಕ್ಷೆಯಿದ್ದು, ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಗುರುವಾರ ಏರ್ ಪೋರ್ಟ್, ರೈಲ್ವೆ ನಿಲ್ದಾಣ, ಕೋವಿಡ್ ಆಸ್ಪತ್ರೆಗಳಿಗೆ, ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ