ಸೈಬರ್ ಅಪರಾಧ ನಿಯಂತ್ರಿಸಲು ಅತ್ಯಾಧುನಿಕ ತಂತ್ರಜ್ಞಾನ ಅಗತ್ಯ

ಬೆಂಗಳೂರು:

      ಆಧುನಿಕ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಇಂದಿಲ್ಲಿ ಹೇಳಿದ್ದಾರೆ.

       ಖಾಸಗಿ ಹೋಟೆಲ್‍ನಲ್ಲಿ ನಡೆದ ದಕ್ಷಿಣ ರಾಜ್ಯಗಳ ಡಿಜಿಪಿ ಹಾಗೂ ಐಜಿಗಳ ಪ್ರಾಂತೀಯ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೈಬರ್ ಅಪರಾಧ ನಿಯಂತ್ರಣ ಅತಿ ದೊಡ್ಡ ಸವಾಲಾಗಿದೆ. ಇಂತಹ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಪ್ರಾಂತೀಯ ರಾಜ್ಯಗಳಲ್ಲಿ ಸಮನ್ವಯತೆ ಹಾಗೂ ಹೊಸ ವ್ಯವಸ್ಥೆಗಳ ಕುರಿತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಈ ಸಂಬಂಧ ದಕ್ಷಿಣ ರಾಜ್ಯಗಳ ಡಿಜಿ, ಐಜಿ ಸಭೆಗಳು ನಡೆಯುವ ಅಗತ್ಯವಿದೆ ಎಂದು ಹೇಳಿದರು.      

      ದಕ್ಷಿಣ ಭಾಗದ ಐದು ರಾಜ್ಯಗಳ ಪೊಲೀಸ್ ಇಲಾಖೆಗಳು ಆಗಾಗ್ಗೇ ಇಂಥ ಸಭೆ ನಡೆಸುವುದರಿಂದ ಅಪರಾಧ ಪ್ರಮಾಣ ಕಡಿಮೆ ಮಾಡಲು ಪರಸ್ಪರ ಸಹಕಾರ, ಅತ್ಯಾಧುನಿಕ ತಂತ್ರಜ್ಞಾನಗಳ ಮಾಹಿತಿ ಹಂಚಿಕೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೂತನ ಪ್ರಯೋಗಗಳ ಮಾಹಿತಿಯನ್ನು ಎಲ್ಲ ರಾಜ್ಯಗಳ ಡಿಜಿಗಳು ಒಂದೆಡೆ ಸಭೆ ನಡೆಸಿ ವಿನಿಮಯ ಮಾಡಿಕೊಳ್ಳುವುದರಿಂದ ಸಮರ್ಪಕವಾಗಿ ಪೆÇಲೀಸ್ ಇಲಾಖೆ ಕೆಲಸ ಮಾಡಲು ಸಾಧ್ಯವಾಗಲಿದೆ. ಇದರ ಪ್ರಾರಂಭವನ್ನು ಕರ್ನಾಟಕ ಪೊಲೀಸ್ ಇಲಾಖೆ ಮಾಡಿರುವುದು ಸಂತಸ ತಂದಿದೆ ಎಂದು ಹೇಳಿದರು.

     ರಾತ್ರಿ ಬೀಟ್ ತೆರಳುವ ಕಾನ್ಸ್ಟೇಬಲ್‍ಗಳು ಪುಸ್ತಕದಲ್ಲಿ ಸಹಿ ಹಾಕಿ ಹೊರಡುತ್ತಾರೆ. ಆದರೆ, ಇವರು ರಾತ್ರಿ ವೇಳೆಯಲ್ಲಿ ಕೆಲಸ ಮಾಡುವ ಕುರಿತು ದಾಖಲೆಗಳನ್ನು ಸಂಗ್ರಹಿಸಿಕೊಡುವ ತಂತ್ರಜ್ಞಾನವನ್ನು ತರಬೇಕಿದೆ ಎಂದರು.

     ನಂತರ ಸುದ್ದಿಗಾರರ ಜತೆ ಮಾತನಾಡಿದ ಡಾ: ಪರಮೇಶ್ವರ್. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು,ಸಮಾಜದಲ್ಲಿ ಮಹಿಳಾ ಸಬಲೀಕರಣ ಆಗುತ್ತಿದೆ. ಎಲ್ಲ ಕ್ಷೇತ್ರದಲ್ಲೂ ಮಹಿಳೆ ಅವಕಾಶವಿದೆ. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ ಎಂದರು.

               ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap