ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣವಿದೆ : ಟಿ ಎಂ ವಿಜಯ ಭಾಸ್ಕರ್

ಬೆಂಗಳೂರು

      ರಾಜ್ಯದಲ್ಲಿ ಬಂಡವಾಳ ಹೂಡಲು ಪೂರಕ ವಾತಾವರಣವಿದ್ದು ಇದರಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ವಿದೇಶದವರೂ ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್  ಅಭಿಪ್ರಾಯಪಟ್ಟರು.

     ನಗರದ ಖಾಸಗಿ ಹೋಟೆಲ್‌ನಲ್ಲಿ ಭಾರತೀಯ ಕೈಗಾರಿಕಾ ಸಂಘಟನೆಯ (ಸಿಐಐ) ೧೨೫ನೇ ವರ್ಷಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ, ಕೈಗಾರಿಕಾ ಹಬ್ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಈ ವಿಷಯದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ ಎಂದರು.

    ಒಂದು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಪ್ರಮಾಣ ಹೆಚ್ಚಾಗಬೇಕಾದರೆ ಅಲ್ಲಿನ ಕೈಗಾರಿಕಾ ನೀತಿ ಉತ್ತಮವಾಗಿರಬೇಕು. ರಾಜ್ಯ ಸರ್ಕಾರ ಬಂಡವಾಳ ಹೂಡಲು ಅನುಕೂಲವಾಗುವ ರೀತಿ ನೀತಿ ಜಾರಿಗೊಳಿಸಿದೆ. ಹಾಗಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ವಿದೇಶದವರೂ ಮುಂದಾಗುತ್ತಿದ್ದಾರೆ ಎಂದು ಹೇಳಿದರು.

    ಇತ್ತೀಚಿಗೆ ದಾವೋಸ್ ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಲ್ವತ್ತು ಕ್ಕಿಂತ ಅಧಿಕ ವಿದೇಶಿ ಕಂಪನಿ, ಹೂಡಿಕೆದಾರರೊಂದಿಗೆ ಚರ್ಚೆ ನಡೆಸಿದ್ದು, ಬಹಳಷ್ಟು ಮಂದಿ ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ ಎಂದರು.

    ಸಿಐಐ ಕರ್ನಾಟಕ ಅಧ್ಯಕ್ಷ ಅಮನ್ ಚೌಧರಿ ಮಾತನಾಡಿ, ದೇಶದ ಆರ್ಥಿಕ ಸ್ಥಿತಿ ಸುಧಾರಣೆಗೆ ಆಮದು ಪ್ರಮಾಣ ಕಡಿಮೆ ಮಾಡಿ ರಪ್ತು ಪ್ರಮಾಣ ಹೆಚ್ಚಿಸುವುದು ಮುಖ್ಯ ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಉತ್ಪಾದಿಸಿದ ವಸ್ತುಗಳನ್ನು ಹೇಗೆ. ಎಲ್ಲಿ ರಪ್ತು ಮಾಡಬೇಕೆಂಬ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.

   ಮೂಲಸೌಲಭ್ಯ ಒದಗಿಸಿದರೆ ಕೈಗಾರಿಕೆ ಸ್ಥಾಪನೆಗೆ ಮುಂದಾಗುತ್ತಾರೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಮುಂದಾಗುವವರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುತ್ತಿದೆ. ಹಾಗಾಗಿ, ಹಲವು ಮಂದಿ ಒಲವು ತೋರುತ್ತಿದ್ದಾರೆ ಎಂದ ಅವರು, ಕೈಗಾರಿಕೆಗಳ ಸ್ಥಾಪನೆಯಿಂದ ಉದ್ಯೋಗ ಅವಕಾಶ ಲಭ್ಯವಾಗಲಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ವೋಲ್ವೋ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ,ಸಿಐಐ ಕರ್ನಾಟಕ ಉಪಾಧ್ಯಕ್ಷ ಸಂದೀಪ್ ಸಿಂಗ್, ನಿರ್ದೇಶಕ   ಕೆ.ರಮೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap