ಚಿತ್ರದುರ್ಗ
ಟಿಪ್ಪು ಸುಲ್ತಾನ್ ಹೆಸರನ್ನು ಪಠ್ಯದಿಂದ ತೆಗೆಯುವುದು ಆರ್‍ಎಸ್‍ಎಸ್ ಅಜಂಡಾ ಆಗಿದ್ದು, ಹಿಂದೂಗಳನ್ನು ತುಷ್ಠೀಕರಣ ಮಾಡಲು ಮುಸ್ಲಿಮ್ ಸಮುದಾಯದ ದಮನಕ್ಕೆ ಇಲ್ಲಿನ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಆರೋಪಿಸಿದ್ದಾರೆ.
2018ರ ಏ.6ರಂದು ನಡೆದ ಸಂವಾದದಲ್ಲಿ ‘ಮೋದಿ ಕಾರ್ಯಕ್ರಮದಲ್ಲಿ ಕುರ್ಚಿ ತೂರಿ’ ಎಂಬ ಹೇಳಿಕೆ ನೀಡಿದ ಆರೋಪದ ಮೇಲೆ ಇವರ ವಿರುದ್ದ ಚಿತ್ರದುರ್ಗದಲ್ಲಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆಗೆಂದು ಇಂದು ಆಗಮಿಸಿದ ಜಿಜ್ಞೆಶ್ ಮೇವಾನಿ ಸುದ್ದಿಗಾರರೊಂದಿಗೆ ಮಾತನಾಡಿದರು
ಬಿಜೆಪಿ ಹಾಗೂ ಆರ್ ಎಸ್ ಎಸ್ ಅವರದು ಕೋಮುವಾದಿ ಮನಸ್ಥಿತಿಯಾಗಿದೆ. ಇದರಿಂದ ಎಂದಿಗೂ ಸಹ ಅವರು ಹೊರಬರಲ್ಲ ಎಂಬುದಕ್ಕೆ ಇದೊಂದು ಸಂಗತಿಯೇ ಸಾಕ್ಷಿಯಾಗಿದೆ ಎಂದ ಅವರು ಬಹುಸಂಸ್ಕೃತಿಯೇ ದೇಶದ ಸೌಂದರ್ಯ ಎಂಬುದನ್ನು ಅರಿತುಕೊಳ್ಳಬೇಕು ಮತ್ತು ಅದನ್ನೆ ನಾವುಗಳು ಆಚರಿಸಬೇಕು ಎಂದು ಹೇಳಿದರು.
ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ, ಟಿಪ್ಪು ಹೆಸರನ್ನು ಪಠ್ಯಪುಸ್ತಕದಿಂದ ಹೊರತೆಗೆಯುವ ವಿಚಾರವಾಗಿ, “ಟಿಪ್ಪು ಸುಲ್ತಾನ್ ಹೆಸರನ್ನು ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಆರೆಸ್ಸೆಸ್ ಹಾಗೂ ಬಿಜೆಪಿಯ ಹಿಡನ್ ಅಜೆಂಡಾ ಇದು, ಹಿಂದೂ ತುಷ್ಟೀಕರಣಕ್ಕಾಗಿ ಇತಿಹಾಸವನ್ನು ಅಳಿಸಲು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು
“ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆಯುವ ಮೂಲಕ ಮುಸ್ಲಿಂ ಸಮುದಾಯವನ್ನು ದಮನ ಮಾಡುವ ಕಾರ್ಯ ನಡೆಯುತ್ತಿದೆ, ಇದರಿಂದ ಹಿಂದೂ ಮುಸ್ಲಿಂ ಸಮುದಾಯಗಳನ್ನು ಇಬ್ಭಾಗಿಸಲಾಗುತ್ತಿದೆ. ಆರ್ ಎಸ್ ಎಸ್ ಕೋಮುವಾದಿ ಮನಸ್ಥಿತಿ ಈ ಕೆಲಸ ಮಾಡುತ್ತಿದೆ. ವೈವಿಧ್ಯತೆ ಮತ್ತು ಏಕತೆಯೇ ಭಾರತದ ಸೌಂದರ್ಯ. ಅದನ್ನು ನಾವು ಪಾಲಿಸಬೇಕಿದೆ” ಎಂದರು.
ದೇಶದಲ್ಲಿ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ತಾಂಡವವಾಡುತ್ತಿವೆ, ಇದಕ್ಕೆ ಪ್ರಧಾನಿ ಮೋದಿ ಬಳಿ ಯಾವುದೇ ಉತ್ತರವಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರ ಹೂಡುತ್ತಿದ್ದಾರೆ. ನರೇಗಾ ಯೋಜನೆ, ಆರೋಗ್ಯ ಯೋಜನೆಗಳು ಮುಗ್ಗರಿಸಿವೆ ಹೋಗಿವೆ. ಜನರಿಗೆ ಈಗ ಬಿಜೆಪಿ ಸರ್ಕಾರದ ಧೋರಣೆ ಅರಿವಾಗುತ್ತಿದೆ. ಎಲ್ಲಾ ಪಕ್ಷದ ನಾಯಕರು ವಾಸ್ತವ ಪರಿಸ್ಥಿತಿಯನ್ನು ಜನರ ಮುಂದಿಡಬೇಕಿದೆ” ಎಂದರು.
ಪ್ರಧಾನಿ ಮೋದಿ ಚಹಾ ಮಾರಿದ ಮಾತಿಗೆ ಪ್ರತಿಕ್ರಿಯಿಸಿದ ಮೇವಾನಿ “ಚೈಲ್ಡಿಶ್, ಜೋಕ್ ಆಫ್ ದಿ ಸೆಂಚುರಿ; ಅವರು ಚಹಾ ಮರಿದ್ದಾರೋ ಇಲ್ಲವೋ ಗೊತ್ತಿಲ್ಲ, ಈಗ ದೇಶ ಮಾರುತ್ತಿದ್ದಾರೆ” ಎಂದು ಮೋದಿ ವಿರುದ್ಧ ಕಿಡಿಕಾರಿದರು. ಆರ್ ಎಸ್ ಎಸ್, ಬಿಜೆಪಿಗೆ ದಲಿತರು, ಮುಸ್ಲಿಮರು 2ನೇ ದರ್ಜೆ ನಾಗರೀಕರಾಗಿದ್ದು, ಅವರನ್ನು ಕೆಲಸಕ್ಕೆ ಮಾತ್ರ ಬಳಸಿಕೊಳ್ಳುವುದು ಬಿಜೆಪಿಯ ಅಜೆಂಡ” ಎಂದು ಸಿಡುಕಿದರು.
ದೇಶದಲ್ಲಿ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ತಾಂಡವವಾಡುತ್ತಿದೆ. ನರೇಗಾ ಯೋಜನೆ, ಆರೋಗ್ಯ ಯೋಜನೆಗಳು ಮುಗ್ಗರಿಸಿವೆ. ಲಕ್ಷಾಂತರ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಇದಕ್ಕೆ ಮೋದಿ ಬಳಿ ಉತ್ತರವಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಭಾವನಾತ್ಮ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ ಎಂದು ಕಿಡಿ ಕಾರಿದರು.
ಜನರಿಗೆ ಈಗ ಬಿಜೆಪಿ ಸರ್ಕಾರದ ಧೋರಣೆ ಅರಿವಾಗುತ್ತಿದೆ. ಎಲ್ಲಾ ಪಕ್ಷದ ನಾಯಕರು ವಾಸ್ತವ ಪರಿಸ್ಥಿತಿ ಜನರ ಮುಂದಿಡಬೇಕಿದೆ. ಸಾವರ್ಕರ್ ಬ್ರಿಟಿಷರ ಕ್ಷಮೆ ಕೇಳಿ 13 ಪತ್ರ ಬರೆದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರವೇ ಇಲ್ಲ ಎಂದು ದೂರಿದರು.ಚಿತ್ರದುರ್ಗದಲ್ಲಿ ಜಿಗ್ನೇಶ್ ಮೇವಾನಿ ವಿರುದ್ಧ ಇರುವ ಪ್ರಕರಣದ ವಿಚಾರವಾಗಿಯೂ ಮಾತನಾಡಿ, “ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ, ಆದರೆ ನಾನು ಆ ರೀತಿ ಹೇಳಿಲ್ಲ. ಅಸಲಿಗೆ ನನಗೆ ಮೋದಿ ಯಾರು ಎಂದೇ ಗೊತ್ತಿಲ್ಲ” ಎಂದು ವ್ಯಂಗ್ಯದ ಧಾಟಿಯಲ್ಲಿ ಉತ್ತರಿಸಿದರು.
ಸಂಸದರು ರಾಜೀನಾಮೆ ನೀಡಲಿ
ಕ್ಷೇತ್ರದ ಸಂಸದ ನಾರಾಯಣ ಸ್ವಾಮಿ ಅವರಿಗೆ ಸ್ವಾಭಿಮಾನ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಗ್ನೇಶ್ ಮೇವಾನಿ ಹೇಳಿದರು
ದಲಿತ ಎಂಬ ಕಾರಣಕ್ಕೆ ಸಂಸದರಿಗೆ ಗ್ರಾಮವೊಂದರಲ್ಲಿ ಪ್ರವೇಶ ನೀಡಲಿಲ್ಲ. ಇದು ದೇಶದ ಸದ್ಯದ ಪರಿಸ್ಥಿತಿ.ಈಗ ಬಗ್ಗೆ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡುವುದಿಲ್ಲ. ಆದ್ದರಿಂದ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿ ಅವರಿಗೆ ಸ್ವಾಭಿಮಾನ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








