ಹೊಸಪೇಟೆ:
ಬಿಎಸ್‌ವೈ ಆಡಿಯೋ ವಿಚಾರ ಹೆಚ್ಚಿನ ಪ್ರಮುಖ್ಯತೆನೀಡುವ ಅಗತ್ಯವಿಲ್ಲ ಅದರ ಸತ್ಯಾಸತ್ಯತೆ ತಿಳಿಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಹಡಗಲಿ ಭಾಗದ ನೆರಸಂತ್ರಸ್ಥ ಸ್ಥಳಕ್ಕೆ ಸೇರಿದಂತೆ ನಾನಾ ಕಾರ್ಯಕ್ರಮಕ್ಕೆ ಭಾಗವಹಿಸಲು ನಗರದ ರೈಲ್ವೆ ನಿಲ್ದಾಣದಲ್ಲಿ ಆಗಮಿಸಿದ ಸಂದರ್ಭದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದರು.
ಸಿಎಂ ಯಡಿಯೂರಪ್ಪ ಅವರು ಹುಬ್ಬಳ್ಳಿ ಯಲ್ಲಿ ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರ ಪರ ಮಾತನಾಡಿರುವ ವಿಚಾರಕ್ಕೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಮುಂದಿನ ಕೆಲವೇ ದಿನಗಳಲ್ಲಿ ಬರಲಿರುವ ರಾಜ್ಯದ ನಾನಾ ಕ್ಷೇತ್ರಗಳ ಮರು ಚುನಾವಣೆಗೆ ಏನಾದರೂ ಪರಿಣಾಮ ಉಂಟಾಗಬಹುದೇ ಎಂಬ ಪ್ರಶ್ನೆಗೆ ಸದ್ಯ ಏನು ಹೇಳುವುದಿಲ್ಲ ಎಂದು ಉತ್ತರಿಸಿದರು.
ಸ್ಥಳೀಯ ರೈಲ್ವೆ ನಿಲ್ದಾಣಕ್ಕೆ ಹಂಪಿ ಎಕ್ಸ್ಪ್ರೆಸ್ ರೈಲಿನ ಮೂಲಕ ಆಗಮಿಸಿದ ಈಶ್ವರಪ್ಪರನ್ನು ಸ್ಥಳೀಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಬರಮಾಡಿಕೊಂಡರು. ನಂತರ ಟಿ.ಬಿ. ಡ್ಯಾಂ ವೈಕುಂಠ ಅತಿಥಿ ಗೃಹಕ್ಕೆ ತೆರಳಿ ಕೆಲ ಕಾಲ ಸ್ಥಳೀಯ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಮುಖಂಡರಾದ ನೇಮಿರಾಜ್ ನಾಯ್ಕ್, ಅನಿಲ್ ಜೋಶಿ, ಜಲೀಲ್, ಪಾಷಾ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ