ಕೇಂದ್ರ ಸರ್ಕಾರದ ಆದೇಶಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ: ಕುಮಾರಸ್ವಾಮಿ

ಬೆಂಗಳೂರು

       ಹಿಂದಿ ಭಾಷೆ ಕಡ್ಡಾಯ ಮಾಡಲು ಹೊರಟಿರುವ ಕೇಂದ್ರಸರ್ಕಾರದ ಆದೇಶಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

      ಲೋಕಾಸಭೆ ಚುನಾವಣೆಯು ಸಮೀಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮತದಾರರ ಒಲವು ಗಳಿಸಲು ಹಲವು ಕಾರ್ಯಕ್ರಮ ಯೋಜನೆಗಳನ್ನು ಜಾರಿಗೆ ತರಲು ಮುಂದಾಗುತ್ತಿದ್ದು ಅದರಲ್ಲಿ ಒಂದಾಗಿರುವ ಹಿಂದಿ ಭಾಷೆ ಕಡ್ಡಾಯ ಆದೇಶಕ್ಕೆ ಹೆಚ್ಚಿನ ಮಹತ್ವದ ನೀಡುವ ಅಗತ್ಯತೆ ಇಲ್ಲ ಎಂದರು

        ನಗರದಲ್ಲಿ’ನ್ಯಾಯ ವಿಜ್ಞಾನದಲ್ಲಿ ಉದಯೋನ್ಮುಖ ಬೆಳವಣಿಗಳು’ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರಲು ಮುಂದಾಗುತ್ತಿದೆ ಅದರಲ್ಲಿ ಇದು ಒಂದಾಗಿದೆ ಎಂದರು.

ಬಾವಿಗೆ ನೀರಿಗೆ ವಿಷ ಕಠಿಣ ಕ್ರಮ

         ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದರಿಂದ ಹಲವರು ಅಸ್ವಸ್ಥರಾಗಿ ಮಹಿಳೆಯೊಬ್ಬರು ಮೃತರಾದ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವಿವರ ಪಡೆದಿದ್ದು ಕೂಡಲೇ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು

        ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯೆಸಿದ ಸಿಎಂ, ಅವರು ಜೆಡಿಎಸ್ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರ ಮೇಲೂ ಅವರು ದಿನನಿತ್ಯ ವಾಗ್ದಾಳಿ ನಡೆಸುತ್ತಿದ್ದರು. ಅವರ ಮಾತುಗಳಿಗೆ ಹೆಚ್ಚಿನ ಒತ್ತುನೀಡಬೇಡಿ ಎಂದರು.

         ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಯಾವುದೇ ಗೊಂದಲ, ಅಸಮಾಧಾನ ಇಲ್ಲ. ಆದರೂ, ಕೆಲ ಮಾಧ್ಯಮಗಳು, ಸೃಷ್ಟಿ ಮಾಡಿಕೊಂಡು, ಸುದ್ದಿ ಮಾಡುತ್ತಿದ್ದು, ಇದರಿಂದ ಜನರಲ್ಲಿ ಗೊಂದಲು ಹುಟ್ಟುಹಾಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link