ಬೆಂಗಳೂರು
ವಿಧಾನಸೌಧದಲ್ಲಿ ಸಿಕ್ಕ ಹಣದ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಈ ಬಗ್ಗೆ ಚರ್ಚೆಯ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ 2 ಕೋಟಿ ರೂ.ಹಣ ಸಿಕ್ಕಿತ್ತು. ಇಂತಹವೆಲ್ಲ ನಡೆಯುತ್ತಲೇ ಇರುತ್ತವೆ. ಹಾಗಾಗಿ ಹಿಂದುಳಿದ ವರ್ಗಗಳ ಸಚಿವ ಪುಟ್ಟರಂಗಶೆಟ್ಟಿ ಸಿಬ್ಬಂದಿ ಬಳಿ ಸಿಕ್ಕ ಹಣದ ಬಗ್ಗೆ ಹೆಚ್ಚು ಮಹತ್ವ ಕೊಡುವುದು ಬೇಡ ಎಂದರು.ಪ್ರಧಾನಿ ನರೇಂದ್ರ ಮೋದಿ ರಫೇಲ್ ಡೀಲ್ ಬಗ್ಗೆ ಲೋಕಸಭೆಯಲ್ಲಿ ಮಾತನಾಡಬೇಕು. ರಫೇಲ್ ವಿಚಾರದಲ್ಲಿ ಪಲಾಯನಗೈಯುತ್ತಿರುವ ಪ್ರಧಾನಿ ವಿರುದ್ಧ ತಾವು ಕಠಿಣವಾಗಿ ಮಾತನಾಡಬೇಕಾಗುತ್ತದೆ ಎಂದು ದೇವೇಗೌಡರು ಎಚ್ಚರಿಕೆಯ ಮಾತುಗಳನ್ನಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ