ಬೆಂಗಳೂರು
ಇಂದಿರಾ ಕ್ಯಾಂಟಿನ್‍ನನ್ನು ಮುಚ್ಚುವ ಯಾವುದೇ ಪ್ರಸ್ತಾಪ, ಸರ್ಕಾರದ ಮುಂದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್‍ನಾರಾಯಣ ಸ್ಪಷ್ಟ ಪಡಿಸಿದರು. ಇಂದಿರಾ ಕ್ಯಾಂಟಿನ್ ಅವ್ಯವಹಾರಗಳ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲಿವೆ. ಹಾಗಾಗಿ ಇದನ್ನೆಲ್ಲಾ ಸರಿಪಡಿಸುವ ಪ್ರಯತ್ನ ಮಾಡಿದ್ದೇವೆ. ಕ್ಯಾಂಟಿನ್ ಮುಚ್ಚುವ ಉದ್ದೇಶ ಇಲ್ಲ ಎಂದರು.
ಇಂದಿರಾ ಕ್ಯಾಂಟಿನ್‍ನಲ್ಲಿ ನಡೆಯುತ್ತಿರುವ ಅಕ್ರಮ, ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ನಡೆದಿದೆ ಅಷ್ಟೆ ಎಂದರು.ಇಂದಿರಾ ಕ್ಯಾಂಟಿನ್ ಮುಚ್ಚುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಅವರು ಪುನರುಚ್ಚರಿಸಿದರು. ಉಪಮುಖ್ಯಮಂತ್ರಿಯಾಗಿ ಜನತೆಗೆ ತನ್ನಿದ ಅನಾನುಕೂಲವಾಗಬಾರದು ಎಂಬ ಕಾರಣಕ್ಕೆ ಝಿರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಹೇಳಿದ್ದೇನೆ. ನಾನು ಸರಳವಾಗಿ ಜನರ ಮಧ್ಯೆ ಓಡಾಡುತ್ತೇನೆ ಎಂದು ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ