ಬೆಂಗಳೂರು
ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ಹಲ್ಲೆಗೊಳಗಾಗಿ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಮೇಲೆ ಹಲ್ಲೆಗೈದ ಕಂಪ್ಲಿ ಶಾಸಕ ಗಣೇಶ್ ಜೊತೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಮೇಲೆ ಹಲ್ಲೆ ನಡೆಸಿರುವ ಶಾಸಕ ಗಣೇಶ್ ಎಲ್ಲಿದ್ದಾರೋ ಗೊತ್ತಿಲ್ಲ ಹಲ್ಲೆಗೈದ ನಂತರ ಅವರ ಜೊತೆ ನಾನು ಮಾತನಾಡಿಲ್ಲ ಅಪರಾಧ ಮಾಡಿರುವ ಅವರ ಮೇಲೆ ಕಾನೂನು ಪ್ರಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು ನಾನಂತೂ ರಾಜಿ ಮಾಡಿಕೊಳ್ಳುವ ಗೋಜಿಗೆ ಹೋಗುವುದಿಲ್ಲ ಎಂದು ಹೇಳಿದರು.
ಚಿಕಿತ್ಸೆ ಪಡೆಯುತ್ತಿರುವ ಆನಂದ್‍ಸಿಂಗ್ ಅವರು ನಾನು ಚೇತರಿಸಿಕೊಳ್ಳುತ್ತಿದ್ದು ಸಂಪೂರ್ಣವಾಗಿ ಗುಣಮುಖರಾಗಲು ಇನ್ನು 15-20 ದಿನ ಬೇಕಾಗಬಹುದು. ತುಂಬಾ ಕ್ರ್ಯಾಕ್ ಹಾಗೂ ಎದೆಯ ಭಾಗಕ್ಕೆ ನೋವಾಗಿದೆ ಎಂದು ಹೇಳಿದರು.
ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು.ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದಾರೆ.
ಈ ವೇಳೆ ಮಾತಿಗೆ ಮಾತು ಬೆಳೆದು, ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ. ಪರಿಣಾಮ ಆನಂದ್ ಸಿಂಗ್ ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
