ಬೆಂಗಳೂರು
ಕೋವಿಡ್-19 ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಅಥವಾ ಅಶಿಸ್ತು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.ಕೊರೋನಾ ಸೋಂಕು ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ, ನಿರ್ಲಕ್ಷ್ಯ ತೋರಿರುವ ಕೆಲವು ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಲೋಪವನ್ನು ಸಹಿಸಲಾಗದು, ಇಂಥವರ ವಿರುದ್ಧ ಈಗಾಗಲೇ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಜಾಗತಿಕ ಸಂಕಷ್ಟದ ಈ ಸಮಯದಲ್ಲಿ ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವಿದೆ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ , ಕೋವಿಡ್ ವಿರುದ್ಧ ಹೋರಾಟದಲ್ಲಿ ಮೇಲುಗೈ ಸಾಧಿಸಲು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಕೊರೋನಾ ಸೋಂಕು ನಿಯಂತ್ರಣದಂತಹ ತುರ್ತು ಸಂದರ್ಭದಲ್ಲಿ, ಯಾವುದೇ ಅಧಿಕಾರಿಗಳು, ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ ತೋರಿದರೆ, ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
