ಬೆಂಗಳೂರು
ಸಂಕ್ರಾಂತಿ ನಂತರ ಸರ್ಕಾರಕ್ಕೂ ಏನೂ ಆಗುವುದಿಲ್ಲ,ಶಾಸಕರೂ ಬದಲಾಗುವುದಿಲ್ಲ. ಆದರೆ ರಾಜಕೀಯದಲ್ಲಿ ಗ್ರಹಗತಿಗಳು ಮಾತ್ರ ಬದಲಾಗುತ್ತವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.ಪಾಟೀಲ್ ಮಾರ್ಮಿಕವಾಗಿ ನುಡಿದಿದ್ದಾರೆ.
ಸಂಕ್ರಾಂತಿ ನಂತರ ಸಮ್ಮಿಶ್ರ ಸರ್ಕಾರ ಬದಲಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಿರಂತರ ಪ್ರಯತ್ನ ನಡೆಸುತ್ತಿದ್ದೆ. ಆದರೆ ಶಾಸಕರೂ ಬದಲಾದರೂ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. 5 ವರ್ಷ ಪೂರೈಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ತಮಗೆ ಸರ್ಕಾರ ನಡೆಸಲು ತೊಂದರೆಯಾಗುತ್ತಿದೆ. ಶಾಸಕರು ಕ್ಷೇತ್ರಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಒತ್ತಡ ತಂದಿರಬಹುದು ಹಾಗಾಗಿ ಅವರು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ