ಬಿತ್ತನೆ ಬೀಜ ಪೂರೈಕೆಗೆ ಯಾವುದೇ ತೊಂದರೆಯಾಗದು: ಕೃಷಿ ಸಚಿವ

ಬೆಂಗಳೂರು

       ಈ ಬಾರಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಡ ಮುಂಗಾರು ಜಿಲ್ಲೆಗಳಲ್ಲಿ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರೆಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಕೊರೊನಾದಿಂದಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜ ಹಾಗೂ ಯೂರಿಯಾ ಗೊಬ್ಬರ ಪೂರೈಕೆಗೆ ಕೊರತೆಯಾಗದಂತೆ ಸೂಕ್ತ ಕ್ರಮ ವಹಿಸಲಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚುವರಿಯಾಗಿ ಯೂರಿಯಾ ಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಿಸಲಾಗಿದೆಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

      2020-21 ನೇ ಸಾಲಿನ ಮುಂಗಾರು ಹಂಗಾಮಿನ 2020 ಏಪ್ರಿಲ್ 1 ರಿಂದ ಜುಲೈ ಅಂತ್ಯದವರೆಗೆ ಒಟ್ಟು 13.99 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು ಇದರಲ್ಲಿ ಯೂರಿಯಾ 4.98 ಲಕ್ಷ ಡಿಎಪಿ 3.06 ಲಕ್ಷ ಮೆಟ್ರಿಕ್ ಟನ್ ಎಂಒಪಿ 1.37 ಲಕ್ಷ ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 4.58 ಲಕ್ಷ ಮೆಟ್ರಿಕ್ ಟನ್ ಗೆ ಬೇಡಿಕೆಯಿದೆ. ಈ ಪೈಕಿ ಜುಲೈ 23 ರವರೆಗೆ ಒಟ್ಟು 13.50 ಲಕ್ಷ ಮೆಟ್ರಿಕ್ ಟನ್ ಅಂದರೆ 5.36 ಮೆಟ್ರಿಕ್ ಟನ್ ಯೂರಿಯಾ ಡಿ ಎ ಪಿ- 2.49 ಲಕ್ಷ ಮೆ.ಟನ್ , ಎಂಒಪಿ . 1.03 ಲಕ್ಷ ಮೆ.ಟನ್ ಮತ್ತು ಕಾಂಪ್ಲೆಕ್ಸ್ , 4.62 ಲಕ್ಷ ಮೆ.ಟನ್ ಸರಬರಾಜಾಗಿರುತ್ತದೆ .ಕಳೆದ ಬಾರಿಗೆ ಹೋಲಿಸಿದರೆ ಶೇ.5.4 ರಷ್ಟು 13.50 ಲಕ್ಷ ಮೆಟನ್ ವಿವಿಧ ರಸಗೊಬ್ಬರಗಳು ಸರಬರಾಜಾಗಿರುತ್ತವೆ. ವಿಶೇಷವಾಗಿ 30.8%ರಷ್ಟು ಯೂರಿಯಾ ರಸಗೊಬ್ಬರ ಹೆಚ್ಚುವರಿ ಸರಬರಾಜಾಗಿರುತ್ತದೆ.

      ಅದರಂತೆ ಮುಂಗಾರು ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಸಹ ಅಗತ್ಯಕ್ಕೆ ತಕ್ಕಂತೆ ಪೂರೈಸಲಾಗುತ್ತಿದ್ದು, ಯಾವುದೇ ಕೊರತೆಯಿರುವುದಿಲ್ಲ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, ರಾಜ್ಯದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಇದುವರೆಗೂ 3,29,862.8 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ. ಹಾಲಿ ರೈತ ಸಂಪರ್ಕ ಕೇಂದ್ರಗಳಲ್ಲಿ 52110 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇದೆ. ರಾಜ್ಯದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ಬಿತ್ತನೆ ಬೀಜ ಹಾಗೂ ಯೂರಿಯಾ ರಸಗೊಬ್ಬರಕ್ಕೆ ಯಾವುದೇ ಕೊರತೆಯಾಗಿಲ್ಲ. ರೈತರ ಬೇಡಿಕೆಗಳನ್ನು ಪೂರೈಸಲು ಇಲಾಖೆ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link