ವಿಶ್ವನಾಥ ಸೋತರೆ ಪ್ರಪಂಚ ಮುಳುಗುವುದಿಲ್ಲ : ವಿ. ಶ್ರೀನಿವಾಸ ಪ್ರಸಾದ್

ಮೈಸೂರು

      ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಜಯಗಳಿಸಲಿದ್ದಾರೆ. ಒಂದು ವೇಳೆ ವಿಶ್ವನಾಥ್ ಸೋತರೂ ಪ್ರಪಂಚ ಮುಳುಗಿ ಹೋಗುವುದಿಲ್ಲ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದರು .ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಷ್ಟು ಸಲ ತೊಡೆ ತಟ್ಟಿ ಬಿದ್ದೋಗಿಲ್ಲ ಹೇಳಿ? ಹುಣಸೂರು ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತರೂ ಏನೂ ಪರಿಣಾಮ ಬಿರೋಲ್ಲ ಎಂದರು.

     15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದೆ. ಮುಂದಿನ ಮೂರೂವರೆ ವರ್ಷ ಸರ್ಕಾರ ಸುಭದ್ರವಾಗಿರಲಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದವರು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದರು ಎಂದು ಜನರ ಮುಂದೆ ಹೇಳಿದ್ದೇವೆ. ಪ್ರತಿಪಕ್ಷಗಳು ಕೂಡ ತಮ್ಮ ನಿಲುವನ್ನು ಹೇಳಿವೆ. ಎಲ್ಲವನ್ನೂ ಜನರು ತೀರ್ಮಾನ ಮಾಡಿದ್ದಾರೆ. ನಾಳೆ ಫಲಿತಾಂಶ ಹೊರ ಬೀಳಲಿದೆ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap