ಕೊಟ್ಟೂರು
ನನ್ನ ರಾಜಕೀಯ ಜೀವನದಲ್ಲಿ ಬೆಳಗಾವಿ ಅಧಿವೇಶನದಂತಹ ಕಳಪೆ ಅಧಿವೇಶನವನ್ನು ಎಂದೂ ನೋಡಿರಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಉಜ್ಜಿನಿ ಸದ್ದರ್ಮ ಪೀಠದಲ್ಲಿ ಶುಕ್ರವಾರ ರಾತ್ರಿ ಮರುಳಸಿದ್ದೇಶ್ವರ ಸ್ವಾಮಿ ಲಕ್ಷ ದೀಪೋತ್ಸವ ಹಾಗೂ ಲಿಂ. ಜಗದ್ಗುರು ಮರುಳಸಿದ್ದ ರಾಜದೇಶಿ ಕೇಂದ್ರ ಶಿವಾಚಾರ್ಯ ಸ್ವಾಮಿಗಳ ಸಪ್ತ ಸಂಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಸಮಿಶ್ರ ಸರ್ಕಾರ ಬಗೆ ಹರಿಸಬಹುದೆಂಬ ನಮ್ಮ ನಿರೀಕ್ಷೆ ಸಂಪೂರ್ಣ ಹುಸಿಯಾಯಿತು. ಜನರ ತೆರಿಗೆ ಹಣದಲ್ಲಿ ಲಕ್ಷಾಂತರ ರು. ಖರ್ಚುಮಾಡಿ ನಡೆಸಿದ ಅಧಿವೇಶ ಯಾರಿಗೂ ಪ್ರಯೋಜನವಾಗಲಿಲ್ಲ ಎಂದರು.
ಕಾರ್ಯತರ ಸಾಲವನ್ನು ಸಮಿಶ್ರ ಸರ್ಕಾರ ಈ ಅಧಿವೇಶನದಲ್ಲಿ ಮನ್ನಾ ಮಾಡುವ ಘೋಷಣೆ ಮಾಡುತ್ತದೆ ಎಂಬ ರೈತರ ನಿರೀಕ್ಷೆ ಸುಳ್ಳಾಯಿತು. ಇದರಿಂದ ಈ ಸರ್ಕಾರ ರೈತ ವಿರೋಧಿ ಸರ್ಕಾರ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಎಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಹೇಳಿ, ಈ ಸರ್ಕಾರದಲ್ಲಿ ಶಾಸಕರು ಸಚಿವ ಸ್ಥಾನಕ್ಕಾಗಿ ಕಚ್ಚಾಡುತ್ತಿದ್ದಾರೆ. ಸಚಿವರು ತಮ್ಮ ಕ್ಷೇತ್ರಗಳ ಅಭಿವೃದ್ದಿಯನ್ನು ಮರೆತ್ತಿದ್ದಾರೆ ಎಂದರು.
ಬಿ.ಎಸ್. ಯಡಿಯೂರಪ್ಪನವರೇ ನಮ್ಮ ನಾಯಕರು, ಅವರ ಮುಖಂಡತ್ವದಲ್ಲಿ ಲೋಕಸಭಾ ಚುನಾವಣೆ ಮಾಡುತ್ತೇವೆ. ಈ ಸಾರಿ ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನವನ್ನು ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಭವಿಷ್ಯ ನುಡಿದರು.
ಅಪರೇಷನ್ ಕಮಲ ನಾವೇಕೆ ಮಾಡಬೇಕು. ನೋಡುತ್ತೀರಿ, ಸಮಿಶ್ರ ಸರ್ಕಾರದಲ್ಲಿ ಕಾಂಗ್ರೇಸ್ ಮತ್ತು ಜೆಡಿಎಸ್‍ನವರೇ ಕಚ್ಚಾಡಿಕೊಂಡು ಸರ್ಕಾರವನ್ನು ಉರುಳಿಸುತ್ತಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನಗೌಡ, ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರ ಮುಂತಾದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
