ಚಿತ್ರದುರ್ಗ;
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಸದಸ್ಯರ ಸಭೆಯು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಇತ್ತೀಚೆಗೆ ನಡೆಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ರಾಜ್ಯಾದ್ಯಕ್ಷ ಡಾ.ಎಸ್.ಎಸ್.ಪ್ರಕಾಶಂ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು, ಮುಖಂಡರುಗಳು ಪಾಳ್ಗೊಂಡಿದ್ದರು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮತ್ತು ಕಾರ್ಮಿಕ ವಿಭಾಗದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ವಿಚಾರವಾಗಿ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಯಿತು
ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಎ.ಜಾಕೀರ್ ಹುಸೇನ್ ಈ ಸಂದರ್ಭದಲ್ಲಿ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಮಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಸರ್ಕಾರದ ಸೌಲಬ್ಯಗಳು ಸರಿಯಾಗಿ ಸಿಗುತ್ತಿಲ್ಲ. ಪಲಾನುಭವಿಗಳಿಗೆ ಅಧಿಕಾರಿಗಳು ತಪ್ಪು ಮಾಹಿತಿ ಕೊಟ್ಟು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಸರ್ಕಾರ ಮತ್ತು ಸಂಬಂಧಿಸಿದ ಕಾರ್ಮಿಕ ಸಚಿವರ ಜೊತೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಮುಖಂಡ ಫೈಲ್ವಾನ್ ಆಫೀಜ್ ಮಾತನಾಡಿ, ಕಾರ್ಮಿಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಸೌಲಬ್ಯಗಳಿದ್ದು, ನೊಂದಾಣಿ ಕೆಲಸ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದರು
ಮುಖಂಡರಾದ ದಸ್ತಗಿರಿ ಸೇರಿದಂತೆ ಕಾರ್ಮಿಕ ವಿಭಾಗದ ಎಲ್ಲಾ ಹಂತದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು