ಬೆಂಗಳೂರು
ಅಪರಿಚಿತ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಸ್ಥಳೀಯರು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು ಅವರ ಸ್ಥಿತಿ ಗಂಭೀರವಾಗಿದೆ.ವ್ಯಕ್ತಿಯ ಬಳಿ ಬೆಲೆ ಬಾಳುವ ವಸ್ತುಗಳನ್ನು ದೋಚಲು ದುಷ್ಕರ್ಮಿಗಳ ಗ್ಯಾಂಗ್ ಹಲ್ಲೆ ನಡೆಸಿದೆ ಎಂದು ಶಂಕಿಸಲಾಗಿದೆ..ಯಶವಂತಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








