ಟಿಪ್ಪು ಜಯಂತಿ ಬಹುತೇಕ ಶಾಂತಿಯುತ

ಬೆಂಗಳೂರು

     ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ನಡೆದ ಟಿಪ್ಪು ಜಯಂತಿ ಸಂಪೂರ್ಣ ಶಾಂತಯುತವಾಗಿತ್ತು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಕಮಲ್‍ಪಂತ್ ತಿಳಿಸಿದ್ದಾರೆ.

        ಜಯಂತಿ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಂಡು ಕಟ್ಟೆಚ್ಚರ ವಹಿಸಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆದ ವರದಿಗಳು ಬಂದಿಲ್ಲ ಎಂದು ಹೇಳಿದರು.

       ಅತಿ ಸೂಕ್ಷ್ಮ ಪ್ರದೇಶಗಳಾದ ಕೊಡಗು, ದಕ್ಷಿಣ ಕನ್ನಡ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರೀಯ ಅರೆಸೇನಾ ಪಡೆ, ಜಿಲ್ಲಾ ಸಶಸ್ತ್ರ ಪಡೆ ಸೇರಿ ಕೇಂದ್ರೀಯ ಪಡೆಗಳನ್ನು ನಿಯೋಜಿಸಲಾಗಿತ್ತು ಎಂದರು.

        ಜಯಂತಿ ಆಚರಣೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲಾಗಿತ್ತು. ಶಾಂತಿ ಸುವ್ಯವಸ್ಥೆ ಕಾಪಾಡಲು ಕೇಂದ್ರೀಯ ಪಡೆಯ ಪೆಲೀಸರು ಚಿತ್ರದುರ್ಗದಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದ್ದರು ಎಂದು ತಿಳಿಸಿದ್ದಾರೆ.ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಮುಖಂಡರು ಕಾರ್ಯಕರ್ತರನ್ನು ಬಂಧಿಸಿ ಸಂಜೆ ಬಿಡುಗಡೆ ಮಾಡಲಾಯಿತು ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ