ಗುರಿ, ಉದ್ದೇಶಗಳ ಈಡೇರಿಕೆಗೆ ತರಬೇತಿ ಕಾರ್ಯಕ್ರಮಗಳು ಅತಿ ಮುಖ್ಯ

 ಜಗಳೂರು:

      ಕಾರ್ಯಕ್ರಮದ ಗುರಿ ಮತ್ತು ಉದ್ದೇಶದ ಈಡೇರಿಕೆಗೆ ತರಬೇತಿ ಕಾರ್ಯಕ್ರಮಗಳು ಅತಿ ಮುಖ್ಯ ಎಂದು ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ ನಿ. ಅಧ್ಯಕ್ಷರಾದ ಕುರುಡಿ ಯು.ಜಿ.ಶಿವಕುಮಾರ್ ಹೇಳಿದರು.

         ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಸಹಕಾರ ಇಲಾಖೆ, ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ ನಿ., ಹಾಗೂ ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಸಹಕಾರ ಹಾಲು ಒಕ್ಕೂಟ ನಿ., ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಗಳೂರು ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ರೀತಿಯ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆÉ ನಡೆದ ಒಂದು ದಿನದ ಜಿಲ್ಲಾ ವಿಶೇಷ ತರಬೇತಿ ಶಿಭಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

          ಈ ಒಂದು ತರಬೇತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಪದಾಧಿಕಾರಿಗಳು ಭಾಗವಹಿಸುವುದರ ಮೂಲಕ ತರಬೇತಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಕರೇ ನೀಡಿದರು.

        ತರಬೇತಿ ಕಾರ್ಯಕ್ರಮಗಳಿಗೆ ಸಂಘದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ತರಬೇತಿ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರಾದ ಹನುಮಂತಪ್ಪನವರು ಮಾತನಾಡಿ ತರಬೇತಿ ಕಾರ್ಯಕ್ರಮದಲ್ಲಿ ಸಹಕಾರ ಸಂಘಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳಿಗೆ ಉಪನ್ಯಾಸಕರಿಂದ ಸೂಕ್ತ ಸಲಹೆಗಳನ್ನು ಪಡೆಯಬಹುದು. ಜೊತೆಗೆ ಕಾಯ್ದೆ, ಕಾನೂನುಗಳನ್ನು ಪಾಲಿಸುವುದರ ಮೂಲಕ ಸಂಘವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗಬಹುದು.

       ತರಬೇತಿ ಕಾರ್ಯಕ್ರಮಗಳಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಹೆಚ್ಚಿನ ಮಾಹಿತಿ ಪಡೆಯಲು ತರಬೇತಿ ಕಾರ್ಯಕ್ರಮವನ್ನು ಪ್ರಮುಖ ಪಾತ್ರ ವಹಿಸುತ್ತವೆ ಎಂದವರು ಹೇಳಿದರು.ಶಿವಮೊಗ್ಗ ಡಿ.ಸಿ.ಸಿ.ಬ್ಯಾಂಕ್‍ನ ನಿವೃತ್ತ ಪ್ರಧಾನ ವ್ಯವಸ್ಥಾಪಕರಾದ ಹೆಚ್.ಕೆ.ಮಹಾಬಲಗಿರಿಯವರು ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ಕಾಯ್ದೆಯ ಇತ್ತೀಚಿನ ತಿದ್ದುಪಡಿ ಅಂಶಗಳ ಬಗ್ಗೆ ಉಪನ್ಯಾಸ ನೀಡಿದರು. ಹಾಗೂ ಜಗಳೂರಿನ ಸಹಕಾರ ಅಭಿವೃದ್ಧಿ ಅಧಿಕಾರಿಯವರಾದ ಸಿ.ಗೋಪಾಲ್‍ರವರು ಸಹಕಾರ ಸಂಘಗಳ ಚುನಾವಣೆ ಪ್ರಕ್ರಿಯೆ ಕುರಿತು ಉಪನ್ಯಾಸ ನೀಡಿದರು. ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರಾದ ಶ್ರೀ.ಆರ್. ಬಸವರಾಜುರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

         ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಸಹಾಯಕ ನಿರ್ದೇಶಕರಾದ ಎಸ್.ಶಂಕರ್‍ನಾಯಕ್, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಹೆಚ್. ಸಂತೋಷ್‍ಕುಮಾರ್ ವ್ಯವಸ್ಥಾಪಕರಾದ ಕೆ.ಎಂ.ಜಗದೀಶ್, ನಿವೃತ್ತ ಉಪನ್ಯಾಸಕರಾದ ಸುಭಾಷ್‍ಚಂದ್ರಬೋಸ್, ಹನುಮಂತಾಪುರದ ಬಸವರಾಜ್ ಸಹಾಯಕ ವ್ಯವಸ್ಥಾಪಕರು ಹರೀಶ್, ಮಾರ್ಗದ ವಿಸ್ತರಣಾಧಿಕಾರಿ ರಶ್ಮಿ , ಶಾಖಾ ವ್ಯವಸ್ಥಾಪಕರುಪ್ರಮೋದುಕುಮಾರ್ ಡಿ.ಸಿ.ಸಿ. ಬ್ಯಾಂಕ್, ಕ್ಷೇತ್ರಾಧಿಕಾರಿಗಳಾದ ಹಾದಿಮನಿ, ಹಾಲಸ್ವಾಮಿಯವರು, ಇತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link