ಪೋಲಿಯೋ ನಿಯಂತ್ರಣಕ್ಕೆ ಲಸಿಕೆ ಹಾಕಿಸಿ : ಶಾಸಕ

ಬಳ್ಳಾರಿ

   ಪೋಲಿಯೋ ರೋಗವನ್ನು ನಿರ್ಮೂಲನೆ ಮಾಡಲು ಪೋಷಕರ ಸಹಕಾರ ಅಗತ್ಯವಾಗಿರುತ್ತದೆ. ಸಾಮಾನ್ಯವಾಗಿ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಪೋಲಿಯೋ ಮೆಲಟೈಸ್ ಎಂಬ ಸೂಕ್ಷ್ಮಾಣುವಿನಿಂದ ಉಂಟಾಗುವ ಪೋಲಿಯೋ ರೋಗದ ನಿಯಂತ್ರಣಕ್ಕಾಗಿ ಮಕ್ಕಳಲ್ಲಿ ಎರಡು ಹನಿ ಲಸಿಕೆಯನ್ನು ತಪ್ಪದೇ ಹಾಕಿಸಬೇಕು ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.

     ನಗರದ ಮಿಲ್ಲರ್‍ಪೇಟೆ ನಗರ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ, ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮಗುವಿಗೆ ಎರಡು ಹನಿ ಲಸಿಕೆ ಹಾಕಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

      ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳಿಗೆ ರಾಷ್ಟ್ರದ್ಯಾಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ತಮ್ಮ ಮನೆಗೆ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಲಸಿಕಾ ಕಾರ್ಯಕರ್ತರು ಭೇಟಿ ನೀಡಿದಾಗ ಪೊಷಕರು ತಮ್ಮ ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಲಸಿಕೆ ಹಾಕಿಸಬೇಕು ಎಂದು ಹೇಳಿದ ಅವರು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮುಂದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

    ಜಿಪಂ ಸಿಇಒ ನಿತೀಶ. ಕೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 8 ತಾಲ್ಲೂಕಗಳಲ್ಲಿ 326704 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 1852 ಮನೆ ಭೇಟಿ ತಂಡಗಳು, 105 ಟ್ರಾನ್ಸಿಟ್ ತಂಡಗಳು, 21 ಸಂಚಾರಿ ತಂಡಗಳು ಸೇರಿದಂತೆ ಒಟ್ಟು 1978 ತಂಡಗಳನ್ನು ನಿಯೋಜಿಸಲಾಗಿದ್ದು 3956 ಜನ ಲಸಿಕೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  

     ಒಟ್ಟು 537 ಕ್ಲಿಷ್ಟಕರ ಸ್ಥಳಗಳನ್ನು ಗುರ್ತಿಸಲಾಗಿದ್ದು ಅದಕ್ಕಾಗಿ 181 ಕ್ಲಿಷ್ಟಕರ ಸ್ಥಳಗಳಿಗೆ ಮನೆ ಬೇಟಿ ನೀಡುವ ತಂಡಗಳಿವೆ. ಇದಕ್ಕಾಗಿ 365 ಮೇಲುಸ್ತುವಾರಿ ತಂಡಗಳು ಮತ್ತು 8 ತಾಲ್ಲೂಕು ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು. 398579 ಡೋಸ್ ಲಸಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜನಾರ್ಧನ ಹೆಚ್.ಎಲ್ ಅವರು ಮಾತನಾಡಿ, ಪೆÇೀಲಿಯೋ ವೈರಸ್‍ನಲ್ಲಿ 3 ವಿಧಗಳಿದ್ದು ಟೈಪ್ 2, ಟೈಪ್ 3 ವೈರಸ್ ನಿರ್ಮೂಲನೆಯಾಗಿದ್ದು ಟೈಪ್ 1 ವೈರಸ್‍ನ ಪ್ರಕರಣಗಳು ಪಕ್ಕದ ರಾಷ್ಟ್ರಗಳಲ್ಲಿ ಕಂಡುಬಂದಿರುವುದರಿಂದ ಮತ್ತು ನಮ್ಮ ದೇಶದ ನಾಗರಿಕರು ಗಲ್ಫ್ ರಾಷ್ಟ್ರಗಳಿಗೆ ದುಡಿಯಲು ಹೋಗುತ್ತಿರುವುದರಿಂದ ಮುಂಜಾಗ್ರತೆಯಾಗಿ ನಾವು ಪೆÇೀಲಿಯೋ ಲಸಿಕೆಯನ್ನು ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಹಾಕಿಸಬೇಕು. ವಲಸೆ ಪ್ರದೇಶಗಳು, ಕೈಗಾರಿಕಾ ಪ್ರದೇಶಗಳು, ಇಟ್ಟಿಗೆ ಬಟ್ಟಿಗಳು, ಅಲೇಮಾರಿ ಕುರಿ ಸಾಕಾಣಿಕೆದಾರರು, ತೋಟದ ಮನೆಗಳು, ಕಟ್ಟಡ ನಿರ್ಮಾಣ ಸ್ಥಳಗಳು ಮುಂತಾದ ಸ್ಥಳಗಳಲ್ಲಿ ಮಕ್ಕಳಿರುವ ಬಗ್ಗೆ ಕ್ರಿಯಾಯೋಜನೆಯಲ್ಲಿ ಹೆಚ್ಚು ಆದ್ಯತೆ ನೀಡಿ ಲಸಿಕೆ ಹಾಕಲು ಕ್ರಮವಹಿಸಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು.

      ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಅವರು ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಇಬ್ರಾಹಿಂ ಬಾಬು., ಶ್ರೀನಿವಾಸ ಮೋತ್ಕರ, ವೀರಶೇಖರರೆಡ್ಡಿ, ಕಲಬುರಗಿ ವಿಭಾಗದ ವಿಭಾಗಿಯ ಉಪ ನಿರ್ದೇಶಕರಾದ ಡಾ. ಶಂಕ್ರಪ್ಪ ಮೈಲಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಎನ್.ಬಸರೆಡ್ಡಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರುಗಳಾದ ಡಾ.ಆರ್.ಎಸ್. ಶ್ರೀಧರ್ ಎಸ್.ಎಮ್.ಒ, ಡಾ.ಗುರುನಾಥ್ ಬಿ ಚೌವ್ಹಾಣ, ಜಿಲ್ಲಾ ಆಯುಷ ಅಧಿಕಾರಿ ಡಾ.ಹೆಚ್ ಕೋಟ್ರಮ್ಮ, ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಅನಿಲ್ ಕುಮಾರ್ ಆರ್.

      ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಮಿಲ್ಲರಪೇಟ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸೌಜನ್ಯ, ಡಾ. ಖಾದ್ರಿ ಜೈನುಲ್ಲಾ ಯುನಾನಿ, ಜಿಲ್ಲಾ ಶುಶ್ರೂಷಣಾಧಿಕಾರಿ ಸರೋಜ, ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾ ನಾಯ್ಕ್, ಜಿಲ್ಲಾ ಆಶಾ ಮೇಲ್ವಿಚಾರಕರು ನೇತ್ರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ , ನರಸಿಂಹ ಮೂರ್ತಿ ಹಾಗೂ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಯವರಾದ ಎಂ ಲೋಕೇಶ್, ಬಿ. ಆರೋಗ್ಯ ಮೇರಿ, ಎಂ. ಕವಿತಾ. ಎಸ್. ನಾಗ ಲಕ್ಷ್ಮೀ. ನಾಗಮಣಿ. ಮಹಾನಗರಪಾಲಿಕೆಯ ದಾದಾಪೀರ ಸೇರಿದಂತೆ ಆಶಾ ಕಾರ್ಯಕರ್ತೆಯರು ತಾಯಂದಿರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link