ಬೆಂಗಳೂರು:
ಬೆಳಗಾವಿ ಅಧಿವೇಶನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಶಾಸಕಾಂಗ ಸಭೆ ನಾಳೆ ನಡೆಯಲಿದೆ.
ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು, ಬೆಳಗಾವಿ ಅಧಿವೇಶನದಲ್ಲಿ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪೂರಕವಾಗಿ ನಡೆಸಬೇಕಾದಂತಹ ಕ್ರಮ ಹಾಗೂ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ.
ನಾಳೆ ಬೆಳಗ್ಗೆ ಅಥವಾ ಮಧ್ಯಾಹ್ನ ಕೋರ ಕಮಿಟಿ ಸಭೆ ನಡೆಯಲಿದ್ದು,ಸಂಜೆ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಆಯೋಜನೆಯಾಗಿರುವ ಕೇಂದ್ರದ ಮಾಜಿ ಸಚಿವ ಅನಂತ ಕುಮಾರ್‍ಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.