ದಾವಣಗೆರೆ:
ಆರ್.ಎಲ್. ಕಾನೂನು ಕಾಲೇಜು, ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಾನವ ಹಕ್ಕುಗಳ ವೇದಿಕೆ, ದಾವಣಗೆರೆ ಇವುಗಳ ಸಂಯುಕ್ತಾಶ್ರಯದಲ್ಲಿ ನಾಳೆ (ಡಿ.10ರಂದು) ಬೆಳಿಗ್ಗೆ 10.30ಕ್ಕೆ ನಗರದ ಆರ್.ಎಲ್.ಕಾನೂನು ಕಾಲೇಜು ಆವರಣದಲ್ಲಿ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಸಂವಿಧಾನ ಓದು ಅಭಿಯಾನ’’ ಕಾರ್ಯಕ್ರಮ ಏರ್ಪಡಿಸಲಾಗಿದೆ
ಕಾರ್ಯಕ್ರಮದ ಉದ್ಘಾಟನೆಯನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಆರ್.ಎಲ್. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್. ರೆಡ್ಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸದಸ್ಯ ಕಾರ್ಯದರ್ಶಿ ಗೌರವಾನ್ವಿತ ಕೆಂಗಬಾಲಯ್ಯ , ಪ್ರಾಧ್ಯಾಪಕರಾದ ಡಾ. ವಿಠ್ಠಲ ಭಂಡಾರಿ, ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ, ಮಾನವ ಹಕ್ಕುಗಳ ವೇದಿಕೆಯ ಬಿ.ಎಂ. ಹನುಮಂತಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಹಾಗೂ ಮಾನವ ಹಕ್ಕುಗಳ ವೇದಿಕೆಯ ಕಾರ್ಯದರ್ಶಿ ಎಲ್.ಹೆಚ್. ಅರುಣ್‍ಕುಮಾರ್, ವಕೀಲ ಕೆ. ಮಹಾಂತೇಶ್ ಆಗಮಿಸ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
