105 ಕೋಟಿ ವೆಚ್ಚದಲ್ಲಿ ಪ್ರವಾಸಿ ತಾಣ ಅಭಿವೃದ್ಧಿ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು

   ರಾಜ್ಯದ ಪ್ರವಾಸಿ ತಾಣಗಳಿಗೆ ದೇಶೀಯ ಹಾಗೂ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 105 ಕೋಟಿ ರೂ. ವೆಚ್ಚದ 144 ನೂತನ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

     ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ಎರಡು ದಿನ ಕಾರ್ಯಾಗಾರವನ್ನು ಬುಧವಾರ ಉದ್ಘಾಟಿಸಿ, ಮಾತನಾಡಿ ರಾಷ್ಟ್ರದಲ್ಲಿ ರಾಜ್ಯದ ಪ್ರವಾಸೋದ್ಯಮವನ್ನು ಮೊದಲನೇ 5 ಸ್ಥಾನಕ್ಕೆ ತರಲು ಸರ್ಕಾರ ಬದ್ಧವಾಗಿದ್ದು ಪ್ರವಾಸೋದ್ಯಮ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚು ಹಣಕಾಸು ನೆರವು ನೀಡಲಾಗುವುದು ಎಂದರು.

     ಮುಂದಿನ 6- 7 ತಿಂಗಳೊಳಗಾಗಿ ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಈಗಾಗಲೇ ಕರ್ನಾಟಕ ವಿಷನ್ ಗ್ರೂಪ್ ಈಗಾಗಲೇ 149 ಕೋಟಿ. ರೂ. ವೆಚ್ಚದಲ್ಲಿ 33 ಕಾಮಗಾರಿಗಳಿಗೆ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

    ರಾಜ್ಯದಲ್ಲಿ ಪ್ರವಾಸಿಗರನ್ನು ಸೆಳೆಯಲು ಪೂರಕ ವಾತಾವರಣ ನಿರ್ಮಾಣವಾಗಬೇಕಿದೆ. ಇದಕ್ಕಾಗಿ ಇಲ್ಲಿ ಸಮಾವೇಶ ಗೊಂಡಿರುವ ಪಾಲುದಾರರು ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರು ಮಾತನಾಡಿ ಪೂರ್ವಿಕರು ಬಿಟ್ಟು ಹೋದ ಪ್ರವಾಸಿ ತಾಣಗಳನ್ನು ಸಂರಕ್ಷಿಸಿ ಪ್ರೋತ್ಸಾಹಿಸುವುದರೊಂದಿಗೆ ಹೊಸ ಪೀಳಿಗೆಯನ್ನು ಆಕರ್ಷಿಸಲು ಇನ್ನಷ್ಟು ಪ್ರವಾಸಿ ತಾಣಗಳನ್ನು ಹುಟ್ಟುಹಾಕಲು ಆಲೋಚಿಸಲಾಗಿದೆ ಎಂದು ಅವರು ಹೇಳಿದರು.

     ನಂದಿಬೆಟ್ಟದಲ್ಲಿ ರೋಪ್ ವೇ ಸೇರಿದಂತೆ ಹಲವಾರು ವಿಷಯಗಳನ್ನು ಕಳೆದ 20 ವರ್ಷಗಳಿಂದ ಹೇಳುತ್ತಲೇ ಬರಲಾಗುತ್ತಿದೆ. ಆದರೆ ಇದನ್ನು ಬದಲಾಯಿಸಬೇಕಾಗಿದೆ ಎಂದು ಅವರು ಹೇಳಿದರು.2020-25 ಪ್ರವಾಸೋದ್ಯಮ ನೀತಿಯಲ್ಲಿ ಏನು ಮಾಡಲು ಸಾಧ್ಯವಿದೆಯೇ ಅದನ್ನೇ ಅಳವಡಿಸಲಾಗುವುದು.

    ಅಲ್ಲದೆ ಚಾಚೂ ತಪ್ಪದೆ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.ವಿದೇಶಗಳಲ್ಲಿ ಹಳೆಯ ಪ್ರವಾಸಿ ತಾಣಗಳ ಜೊತೆ ಹೊಸ ಪ್ರವಾಸಿ ತಾಣಗಳನ್ನು ಸೃಷ್ಟಿಸಲಾಗುತ್ತಿವೆ ಎಂದ ಅವರು ವಿಷನ್ ಗ್ರೂಪ್ ಸದಸ್ಯರು, ಹಿಂದಿನ ಪ್ರವಾಸೋದ್ಯಮ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಹೊಸ ಪ್ರವಾಸೋದ್ಯಮ ಹೇಗಿರಬೇಕು ಎಂಬ ಬಗ್ಗೆ ಅವರ ಆಲೋಚನೆಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು.

    ಕಂದಾಯ ಸಚಿವ ಆರ್.ಅಶೋಕ್ ಅವರು ಮಾತನಾಡಿ ಚಿಕ್ಕಮಗಳೂರು ಸೇರಿದಂತೆ ಹಲವಾರು ಪ್ರವಾಸಿ ತಾಮಗಳಲ್ಲಿ ಇಂದಿಗೂ ಶೌಚಾಲಯಗಳಾಗಲಿ, ಹೋಟೆಲ್‌ಗಳಾಗಲಿ ಇರುವುದಿಲ್ಲ. ಆಕರ್ಷಕ ತಾಣಗಳಲ್ಲಿ ನಿಂತು ಪ್ರವಾಸಿಗರೂ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಅಲ್ಲಿ ಬ್ಯಾರಿ ಕೇಡ್‌ಗಳನ್ನು ಹಾಕಿರುವುದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮಾತನಾಡಿ, ವರದಿಯೊಂದರ ಪ್ರಕಾರ ಹೆಚ್ಚು ಪ್ರವಾಸಿಗರು, ತಮಿಳುನಾಡು, ಆಂಧ್ರಪ್ರದೇಶಗಳಿಗೆ ತೆರಳುತ್ತಾರೆ. ವಿದೇಶಿ ಪ್ರವಾಸಿಗರು ಕೇರಳ ಮತ್ತು ಗೋವಾ ರಾಜ್ಯಗಳಿಗೆ ತೆರಳುತ್ತಾರೆ. ಕರಾವಳಿ ಪ್ರದೇಶಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕೆಂದು ಹೇಳಿದರು.

   ಪ್ರವಾಸೋದ್ಯಮ ಕಾರ್ಯಪಡೆ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರು ಪ್ರವಾಸೋದ್ಯಮ ತಾಣಗಳು ಮನರಂಜನೆ ಜೊತೆಗೆ ಉದ್ಯಮವಾಗಿಯೂ ಪರಿವರ್ತಿತವಾಗಬೇಕಿದೆ. ಸಣ್ಣ ಸಣ್ಣ ರಾಷ್ಟ್ರಗಳು ಪ್ರವಾಸೋದ್ಯಮದಿಂದ ಆದಾಯದಿಂದಲೇ ಅಭಿವೃದ್ಧಿ ನಷ್ಟಗಳಾಗಿದೆ ಎಂದು ಹೇಳಿದರು.ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಅನಿಲ್ ಕುಮಾರ್ ಸ್ವಾಗತಿಸಿದರು. ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ಎನ್. ರಮೇಶ್ ವಂದಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link