ತುಮಕೂರು
ತುಮಕೂರು ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ಫೆ.13 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ. ತಾ.ಪಂ. ಅಧ್ಯಕ್ಷ ಗಂಗಾಂಜನೇಯ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.
ಈ ಸಭೆಯಲ್ಲಿ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ, ವಿಕಲಚೇತನ ಫಲಾನುಭವಿಗಳನ್ನು ಆಯ್ಕೆ ಮಾಡುವ ಬಗ್ಗೆ, 2018-19 ನೇ ಸಾಲಿಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳನ್ನು ಅನುಷ್ಠಾನ ಮಾಡಿರುವ ಬಗ್ಗೆ, ಎಲ್ಲ ಇಲಾಖೆಗಳ ಪ್ರಗತಿ ಬಗ್ಗೆ, ರೇಷನ್ ಕಾರ್ಡ್ ವಿತರಣೆ ಮತ್ತು ಪ್ರಗತಿ ಬಗ್ಗೆ ಹಾಗೂ ಅಧ್ಯಕ್ಷರ ಅನುಮತಿ ಮೇರೆಗೆ ಬರುವ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು.
ತಾ.ಪಂ. ಸದಸ್ಯರುಗಳೊಂದಿಗೆ ತಾ.ಪಂ.ಗೆ ನಾಮನಿರ್ದೇಶನಗೊಂಡಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಸಹ ಸಭೆಯಲ್ಲಿ ಭಾಗವಹಿಸುವರು. “ತುಮಕೂರು ತಾಲ್ಲೂಕಿನ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಪರವಾಗಿ ಪ್ರತಿನಿಧಿಗಳನ್ನು ನಿಯೋಜಿಸದೆ ತಾವೇ ಖುದ್ದಾಗಿ ಈ ಸಭೆಗೆ ಹಾಜರಿರಲು” ತಾ.ಪಂ.ನ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
