ತಿಪಟೂರು
ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಹತ್ಯಾಳು ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಟ್ರ್ಯಾಕ್ಟರ್ ಮಗುಚಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕಿಬ್ಬನಹಳ್ಳಿ ಹೋಬಳಿ ಹತ್ಯಾಳ್ ಬೆಟ್ಟದಲ್ಲಿ ಶನಿವಾರ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಬೆಟ್ಟಕ್ಕೆ ಹರಿಸೇವೆ ಸಲ್ಲಿಸಲು ಬಂದಿದ್ದು, ಕಾರ್ಯ ಮುಗಿಸಿ ಬೆಟ್ಟದಿಂದ ಕೆಳಗಿಳಿಯುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
