ಹುಳಿಯಾರು
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹುಳಿಯಾರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹುಳಿಯಾರು ಕ್ಲಸ್ಟರ್ ವ್ಯಾಪ್ತಿಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಸದಸ್ಯರ ತರಬೇತಿ ಆಯೋಜಿಸಲಾಗಿತ್ತು.
ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕಾಂತರಾಜುರವರು ಶಾಲೆಯ ಅಭಿವೃದ್ಧಿಯಲ್ಲಿ ಎಸ್ಡಿಎಂಸಿ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ಸದಸ್ಯರೊಂದಿಗೆ ಸಂವಾದಿಸಿದರು ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೋಷಕರು ಶಿಕ್ಷಕರ ಜೊತೆ ಕೈ ಜೋಡಿಸಲು ತಿಳಿಸಿದರು.
ಸಿ ಅರ್ ಪಿ ದಯಾನಂದ್ ಅವರು ಎಸ್ಡಿಎಂಸಿ ರಚನೆ ವಿಧಾನ, ಶಿಕ್ಷಣ ಹಕ್ಕು ಕಾಯಿದೆ ಅಡಿ ಪ್ರಜಾಪ್ರಭುತ್ವ ಆಶಯದಂತೆ ಪೋಷಕರಿಂದಲೇ ರಚಿತವಾದ ಅದರ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ಕೆಂಕೆರೆ ಶಾಲಾ ಸಮಿತಿ ಅಧ್ಯಕ್ಷರಾದ ನಾಗರಾಜುರವರು ಕಾರ್ಯಕ್ರಮ ಉದ್ಘಾಟಿಸಿದರು. ಕ್ಲಸ್ಟರ್ ವ್ಯಾಪ್ತಿ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರುಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
