ದಾವಣಗೆರೆ
ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಏ.17 ರಂದು ಜಿಲ್ಲಾಡಳಿತದ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್. ಶಿವಮೂರ್ತಿ ನೇತೃತ್ವದಲ್ಲಿ ಮತಗಟ್ಟೆ ಸೂಕ್ಷ್ಮ ವೀಕ್ಷಕರಿಗೆ ತರಬೇತಿಯನ್ನು ಏರ್ಪಡಿಸಿ ಮತದಾನದಂದು ಅವರು ತಮ್ಮ ತಮ್ಮ ಮತಗಟ್ಟೆಯಲ್ಲಿ ಅಗತ್ಯವಾಗಿ ನಿರ್ವಹಿಸಬೇಕಾದ ಕರ್ತವ್ಯ, ಜವಾಬ್ದಾರಿ ಹಾಗೂ ಪ್ರಕಾರ್ಯಗಳ ಕುರಿತು ಸಮಗ್ರವಾಗಿ ತಿಳಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ವಿಶೇಷ ಭೂಸ್ವಾಧೀನ ಅಧಿಕಾರಿ ರೇಷ್ಮಾ ಹಾನಗಲ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಎಲ್ಲಾ ಸೂಕ್ಷ್ಮ ವೀಕ್ಷಕರುಗಳು ಹಾಜರಿದ್ದರು.