ಜನರನ್ನು ತಂಬಾಕು ಸೇವನೆಯಿಂದ ಮುಕ್ತರನ್ನಾಗಿಸಿ

ದಾವಣಗೆರೆ :

    ವೈದ್ಯರು ಜನಸಾಮಾನ್ಯರಿಗೆ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಹೇಳಿ, ಜಾಗೃತಗೊಳಿಸಿ ತಂಬಾಕು ಸೇವನೆಯಿಂದ ಸಾರ್ವಜನಿಕರನ್ನು ಮುಕ್ತ ಗೊಳಿಸಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ವೈ ಬಸಾಪುರ ಕಿವಿಮಾತು ಹೇಳಿದರು.

    ನಗರದ ಚೇತನಾ ಹೊಟೇಲ್ ಸಭಾ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಆಡಳಿತ ವೈದ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

     ಪ್ರಪಂಚದಲ್ಲಿ ಜನರು ದೇವರ ನಂತರದ ಸ್ಥಾನವನ್ನು ವೈದ್ಯರು ಮತ್ತು ನ್ಯಾಯಾಧೀಶರಿಗೆ ನೀಡಿದ್ದಾರೆ. ನ್ಯಾಯಾಧೀಶರು ಮತ್ತು ವೈದ್ಯರು ಹೇಳುವ ಮಾತುಗಳನ್ನು ಸಾರ್ವಜನಿಕರು ಅನುಸರಿಸುತ್ತಾರೆ. ಆದ್ದರಿಂದ ವೈದ್ಯರು ಸಾಮಾನ್ಯ ಜನರಿಗೆ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಜಾಗೃತಗೊಳಿಸಿ, ದುಶ್ಚಟಗಳಿಂದ ಮುಕ್ತರನ್ನಾಗಿಸಿ ಉತ್ತಮ ಆರೋಗ್ಯ ಹೊಂದುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

    ವೈದ್ಯ ವೃತ್ತಿಯು ಪವಿತ್ರ ವೃತ್ತಿಯಾಗಿದ್ದು, ಜನರ ಮನಃಸ್ಥಿತಿಯನ್ನು ಬಲಾಯಿಸುವ ಶಕ್ತಿ ವೈದ್ಯರಿಗಿದೆ. ಚಿಕಿತ್ಸೆಯೊಂದಿಗೆ ಜನರಲ್ಲಿ ಮಾನಸಿಕ ಧೈರ್ಯ ತುಂಬಿ ಬದಲಾವಣೆಯತ್ತ ಸಾಗಿಸುವ ಸಾಮಥ್ರ್ಯ ವೈದ್ಯ ವೃತ್ತಿಗಿದ್ದು, ಆರೋಗ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ವೈದ್ಯರ ಪಾತ್ರ ಬಹುಮುಖ್ಯವಾಗಿದೆ ಎಂದರು.

     ಪ್ರಸ್ತುತ ದಿನಗಳಲ್ಲಿ ತಂಬಾಕು ಮತ್ತು ಮಾದಕ ದ್ರವ್ಯಗಳ ಸೇವನೆ ಹೆಚ್ಚಾಗುತ್ತಿದ್ದು, ಎಲ್ಲಾ ಮಾದಕ ದ್ರವ್ಯಗಳಿಗೆ ಮೂಲ ಕಾರಣ ತಂಬಾಕು. ತಂಬಾಕಿನ ಸೇವನೆಯಿಂದ ಸಂಭವಿಸುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು. ಇದರಿಂದ ಮಾದಕ ದ್ರವ್ಯಗಳ ಸೇವನೆಯನ್ನು ಕಡಿಮೆಗೊಳಿಸಲು ಸಾಧ್ಯವಿದೆ ಎಂದರು.

     ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್. ಬಡಿಗೇರ್ ಮಾತನಾಡಿ, ಮನುಷ್ಯ ಆರೋಗ್ಯಕರವಾಗಿ ಜೀವನ ನಡೆಸಲು ವೈದ್ಯರು ಪಾತ್ರ ಪ್ರಮುಖವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಜನತೆ ತಂಬಾಕು, ಸಿಗರೇಟ್ ಮತ್ತು ಮಾದಕ ದ್ರವ್ಯಗಳ ಸೇವನೆಗೆ ದಾಸರಾಗುತ್ತಿದ್ದಾರೆ. ಈ ಎಲ್ಲಾ ಉತ್ಪನ್ನಗಳು ಆರೋಗ್ಯಕ್ಕೆ ಹಾನಿಕಾರಕ ವಾಗಿದ್ದು, ಇಂತಹ ಉತ್ಪನ್ನಗಳನ್ನು ಸೇವನೆ ಮಾಡದಂತೆ ಯುವಜನತೆ ಮತ್ತು ಹಳ್ಳಿಯಲ್ಲಿರುವ ಜನರಿಗೆ ಮಾಹಿತಿ ನೀಡಿವುದರ ಮೂಲಕ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ನಮ್ಮ ಕರ್ತವ್ಯದ ಅವಧಿಯ ನಂತರ ನಾವೆಲ್ಲರೂ ಸೇರಿ ಗ್ರಾಮಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸೋಣ ಎಂದು ಹೇಳಿದರು.

    ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಾಧಿಕಾರಿ ಜಿ.ಡಿ. ರಾಘವನ್ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆಯನ್ನು 2003ರಲ್ಲಿ ಅನುಷ್ಠಾನಗೊಳಿಸಲಾಗಿದೆ. ಇದರ ಅನ್ವಯ ಜಿಲ್ಲೆಯಲ್ಲಿ ತಂಡಗಳನ್ನು ರಚಿಸಿಕೊಂಡು ತಂಬಾಕು ನಿಯಂತ್ರಣ ಮತ್ತು ತಂಬಾಕು ದುಷ್ಟರಿಣಾಮಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಕಾರ್ಯ ನಿರ್ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮವನ್ನಾಗಿಸುವ ನಿರ್ಣಯ ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾರ್ಯ ನಿರ್ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

     ಓರಲ್ ಮೆಡಿಸಿನ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ.ರಾಜೇಶ್ವರಿ ಅಣ್ಣಿಗೇರಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿ, ತಂಬಾಕಿನ ಸೇವನೆಯಿಂದ ಉಂಟಾಗುವ ಕಾಯಿಲೆಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯ ಕ್ರಮದಲ್ಲಿ ಜಿಲ್ಲಾ ವಿ.ಬಿ.ಡಿ.ಸಿ ಅಧಿಕಾರಿ ಡಾ.ನಟರಾಜ.ಕೆ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ ಹಾಗೂ ವೃತ್ತಿನಿರತ ವೈದ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link