ತುಮಕೂರು:
ಇಂದು ಬೆಳಗ್ಗೆ 11 ಗಂಟೆಗೆ ತುಮಕೂರು ಮಹಾನಗರ ಪಾಲಿಕೆ ಚುನಾವಣೆ ನಡೆದಿದ್ದು, ಮೇಯರ್ ಹಾಗೂ ಉಪಮೇಯರ್ ಆಯ್ಕೆ ಅಂತ್ಯಗೊಂಡಿದೆ.
ಜೆಡಿಎಸ್‌ನ ಲಲಿತಾ ರವೀಶ್ ಅವರು ಎರಡನೇ ಬಾರಿಗೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ರೂಪ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್‌ನಲ್ಲಿ ಮೇಯರ್ ಅಭ್ಯರ್ಥಿ ಆಯ್ಕೆಗೆ ತೀವ್ರ ಪೈಪೋಟಿ ಎದುರಾಗಿತ್ತು. ಸಚಿವ ಎಸ್.ಆರ್.ಶ್ರೀನಿವಾಸ್, ಶಾಸಕ ಡಿ.ಸಿ. ಗೌರಿಶಂಕರ್ ಬಣಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ಎಸ್.ಆರ್.ಶ್ರೀನಿವಾಸ್ ಅವರು ಮೇಲುಗೈ ಸಾಧಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ಹಂಚಿಕೊಂಡಿವೆ. ಮೊದಲ ಅವಧಿಯ ಮೇಯರ್ ಸ್ಥಾನ ಜೆಡಿಎಸ್‌ಗೆ, ಉಪಮೇಯರ್ ಸ್ಥಾನ ಕಾಂಗ್ರೆಸ್‌ಗೆ ಒಲಿದಿದೆ. ಎರಡನೇ ಅವಧಿಯಲ್ಲಿ ಕಾಂಗ್ರೆಸ್‌ಗೆ ಮೇಯರ್ ಸ್ಥಾನ, ಜೆಡಿಎಸ್‌ಗೆ ಉಪಮೇಯರ್ ಸ್ಥಾನ ದೊರೆಯಲಿದೆ. ಮೈತ್ರಿ ಧರ್ಮದಂತೆ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
