ವಿಧ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಇಬ್ಬರ ಬಂಧನ

ಬೆಂಗಳೂರು

          ಸೈಕಲ್ ಕಳ್ಳತನ ಮಾಡಿದ್ದಾರೆ ಎಂದು ಟ್ಯೂಷನ್ ಕ್ಲಾಸ್‍ಗೆ ನುಗ್ಗಿ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

         ಅಮೃತಹಳ್ಳಿಯ ಕೃಷ್ಣಮೂರ್ತಿ ಮತ್ತು ಅವಿನಾಶ್ ಬಂಧಿತ ಆರೋಪಿಗಳಾಗಿದ್ದಾರೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ಸೈಕಲ್ ಕಳ್ಳತನ ಮಾಡಿದ್ದ ಎಂದು ಆರೋಪಿಸಿ ವಿದ್ಯಾರ್ಥಿಗಳಾದ ಭಾಸ್ಕರ್ ಮತ್ತು ವಿನೋದ್‍ನನ್ನು ಇನೋವಾ ಕಾರಿನಲ್ಲಿ ಆರೋಪಿಗಳು ಅಪಹರಣ ಮಾಡಿ ಮನೆಯೊಂದರಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದರು.

      ಈ ಕುರಿತು ವಿದ್ಯಾರ್ಥಿಗಳ ಪೋಷಕರು ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಕ್ಕಳನ್ನ ರಕ್ಷಿಸಿ, ಪ್ರಕರಣ ಸಂಬಂಧ ಕೃಷ್ಣಮೂರ್ತಿ ಮತ್ತು ಅವಿನಾಶ್ ಎಂಬುವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link