ಕುಣಿಗಲ್
ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಎಪ್ಪತ್ತೈದು ಉರ್ಕೇಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾನೆ
ಮೃತ ವ್ಯಕ್ತಿ ಶಿವಪ್ರಸಾದ್ (25) ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿಯ ಕೋಟವಾಳು ಗ್ರಾಮದ ಈತ ಬೆಂಗಳೂರಿನಲ್ಲಿ ವಾಸವಿದ್ದು ತನ್ನ ಸ್ವಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದೆ. ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಇಬ್ಬರು ಸವಾರರಿಗೂ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಶಿವಪ್ರಸಾದ್ ಮೃತನಾಗಿದ್ದು, ಈ ಸಂಬಂಧ ಕುಣಿಗಲ್ ಪೆಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ