ಇಂದು ನಗರಕ್ಕೆ ಸಚಿವ ಖಾದರ್ ಭೇಟಿ : ಪಾಲಿಕೆಯಲ್ಲಿ ಅಹವಾಲು ಸ್ವೀಕಾರ, ಸಭೆ

ತುಮಕೂರು

     ರಾಜ್ಯದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಜುಲೈ 6 ರಂದು ತುಮಕೂರು ನಗರಕ್ಕೆ ಭೇಟಿ ನೀಡಲಿದ್ದು, ಪಾಲಿಕೆ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರಲ್ಲದೆ, ವಿವಿಧ ಇಲಾಖೆಗಳ ಸರಣಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಿದ್ದಾರೆ.

       ಸಚಿವರು ಬೆಂಗಳೂರಿನಿಂದ ಹೊರಟು ಬೆಳಗ್ಗೆ 9 ಗಂಟೆಗೆ ತುಮಕೂರು ನಗರಕ್ಕೆ ಆಗಮಿಸುವರು. ಬಳಿಕ ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ನಗರದಲ್ಲಿ ಸ್ಮಾರ್ಟ್ ಸಿಟಿ, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಪೂರೈಕೆ ಮತ್ತು ಒಳಚರಂಡಿ ಮಂಡಲಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಪರಿವೀಕ್ಷಣೆ ನಡೆಸುವರು. ಆನಂತರ ಸಂಜೆ 5-30 ರವರೆಗೂ ಪಾಲಿಕೆ ಕಚೇರಿಯಲ್ಲೇ ಇರುವರು.

      ಮೊದಲಿಗೆ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ತುಮಕೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

        ನಂತರ ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಇದೇ ಸ್ಥಳದಲ್ಲಿ ತುಮಕೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಹಾಗೂ ಸಾರ್ವಜನಿಕ ಸಂಪರ್ಕ ಸಭೆ ನಡೆಸುವರು.ಅಪರಾಹ್ನ 12 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪಾಲಿಕೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸುವ ಸಚಿವರು, ಮಧ್ಯಾಹ್ನ 2 ರಿಂದ 2-30 ರವರೆಗೆ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸುವರು.

       ಬಳಿಕ ಮತ್ತೆ ಇದೇ ಸ್ಥಳದಲ್ಲಿ ಮಧ್ಯಾಹ್ನ 2-30 ರಿಂದ 3-30 ಗಂಟೆಯವರೆಗೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸುವರಲ್ಲದೆ, ಸಾರ್ವಜನಿಕ ಸಭೆ ನಡೆಸುವರು. ಮಧ್ಯಾಹ್ನ 3-30 ರಿಂದ 4-30 ರವರೆಗೆ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸುವರು.

     ಕೊನೆಯದಾಗಿ ಸಂಜೆ 4-30 ರಿಂದ 5-30 ರವರೆಗೆ ಇದೇ ಸ್ಥಳದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ಹಾಗೂ ಕೆ.ಯು.ಐ.ಡಿ.ಎï.ಸಿ. ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಕಾಂಗ್ರೆಸ್ ಕಚೇರಿಗೆ ಭೇಟಿ

       ಇವೆಲ್ಲ ಕಾರ್ಯಕ್ರಮ ಮುಗಿದ ಬಳಿಕ ಸಚಿವ ಖಾದರ್ ಅವರು ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಸಂಜೆ 5-30 ಕ್ಕೆ ಭೇಟಿ ನೀಡುವರು. ಸಂಜೆ 6-30 ರ ಬಳಿಕ ಬೆಂಗಳೂರಿಗೆ ವಾಪಸ್ಸಾಗುವರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap