ಹಾವೇರಿ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುರುವಾರ ನಾಗೇಂದ್ರನಮಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಜರುಗಿತು.ಶಿಬಿರದಲ್ಲಿ ಚಿಕ್ಕ ಮಕ್ಕಳ ತಜ್ಞರಾದ ಡಾ.ಪಿ.ಆ.ರ್.ಹಾವನೂರ, ಡಾ. ಶ್ರೀದೇವಿ ಕೊಳ್ಳಿ ಹಾಗೂ ವೈದ್ಯಾಧಿಕಾರಿ ಡಾ. ಎಂ.ಕೆ.ನದಾಪ್ ಅವರುಗಳು ಚಿಕ್ಕ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ ಔಷಧಿಗಳನ್ನು ವಿತರಿಸಲಾಯಿತು. 34 ಜನರ ಬಿ.ಪಿ. ಹಾಗೂ ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷಿಸಲಾಯಿತು. ಈ ಪೈಕಿ ಮೂರು ರೋಗಿಗಳಿಗೆ ಸಕ್ಕರೆ ಪ್ರಮಾಣ ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅವರಿಗೆ ಉಚಿತವಾಗಿ ಮಾತ್ರೆ ವಿತರಿಸಲಾಯಿತು. ಶಿಬಿರದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ