ಹಾನಗಲ್ಲ :
ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾನಗಲ್ಲ ಘಟಕ ತಹಶೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು.
ಸೋಮವಾರ ಹಾನಗಲ್ಲಿನಲ್ಲಿ ಪ್ರತಿಭಟನ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ತಾಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಒದಗಿಸುವ ಭರವಸೆ ನೀಡಿದ್ದರು.
ಆದರೆ ಪ್ರಸ್ತುತ ಸಮ್ಮಿಶ್ರ ಸರಕಾರ ಆದೇಶವನ್ನು ರದ್ದುಪಡಿಸಿ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಉಚಿತ ಬಸ್‍ಪಾಸ್‍ಗಾಗಿ ಕಾಯುತ್ತಿದ್ದರು. ಅವರಿಗೆ ತೀವ್ರ ನಿರಾಸೆಯಾಗಿದೆ. ರೈತರ ಸಾಲಮನ್ನಾ ವಿಷಯ ಮುಂದಿಟ್ಟುಕೊಂಡು ರಾಜ್ಯ ಸರಕಾರ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗುತ್ತಿದ್ದಾರೆ.
ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವ್ಯವಸ್ಥೆಯನ್ನು ಕೂಡಲೇ ಜಾರಿಗೆ ತರಬೇಕು. ರಾಜ್ಯ ಸರಕಾರ ತನ್ನ ಆದೇಶವನ್ನು ಹಿಂಪಡೆದು ಉನ್ನತ ಶಿಕ್ಷಣದವರೆಗೂ ಪಾಸ್ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮಲ್ಲಪ್ಪ ನಾಗರವಳ್ಳಿ, ಬಸವರಾಜ ಕಟ್ಟಿಮನಿ, ಭರತ ಹುಳ್ಳಿಕಾಶಿ, ಜಿ.ಭರತಕುಮಾರ, ರಿತೇಶ ತಳವಾರ, ಮೇಘರಾಜ ರಾಥೋಡ, ಮಾಲತೇಶ ಮಾಳಿ, ವಿಜಯ ಜಾಡರ, ಅರುಣಕುಮಾರ ಬಾರ್ಕಿ, ಶಂಬು ಮಲ್ಲಿಗ್ಗಾರ, ಎಚ್.ಮಾಲು, ಎಸ್.ಕೆ.ವಿರೆಶ, ಸಚಿನ ವಾಲಿಕಾರ ಮೊದಲಾದವರು ಈ ಸಂದರ್ಭದಲ್ಲಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
