ಬೆಂಗಳೂರು :
ಕಲಬುರ್ಗಿ ಕ್ಷೇತ್ರದ ಬಿಜೆಪಿ ಸಂಸದರಾಗಿರುವಂತ ಡಾ.ಉಮೇಶ್ ಜಾಧವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವಿನಿಂದಾಗಿ ನಗರ ಜಯದೇವ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಇಂದು ಬೆಳಿಗ್ಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಆರೋಗ್ಯವನ್ನು ತಪಾಸಣೆಯನ್ನು ಜಯದೇವ ಆಸ್ಪತ್ರೆಯ ಮುಖ್ಯಸ್ಥರಾದಂತ ಡಾ.ಮಂಜನಾಥ್ ಅವರು ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಯಾರೂ ಆತಂಕ ಪಡಬಾರದು ಎಂಬುದಾಗಿ ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ