ಬೆಂಗಳೂರು
ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಇಂದು ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಶ್ರೀ ಶರಣ ಬಸವೇಶ್ವರ ದೇವಸ್ಥಾನಲ್ಲಿ ಆಶೀರ್ವಾದ ಪಡೆದು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಾಧವ್, ಸರಿಯಾಗಿ 11:27ಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್,ಬಾಬುರಾವ್ ಚಿಂಚನಸೂರ್,ಧರ್ಮಣ್ಣ ದೊಡ್ಮನಿ, ಎಂಎಲ್ಸಿ ಬಿ.ಜಿ.ಪಾಟೀಲ್ ಉಪಸ್ಥಿತರಿದ್ದರು.ಇಂದು ಬೆಳಿಗ್ಗೆ ಸಾಂಕೇತಿಕವಾದ ನಾಮಪತ್ರ ಸಲ್ಲಿಸಿದ ಜಾಧವ್ ಇಂದು ಮಧ್ಯಾಹ್ನ 2 ಗಂಟೆಗೆ ನಗರದ ನಗರೇಶ್ವರ ಶಾಲೆಯಿಂದ ಹೊರಗೆ ಜಾಥಾ ಮೂಲಕ ಆಗಮಿಸಿ ಸಾಮೂಹಿಕವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.