ತುರುವೇಕೆರೆ
ತಾಲ್ಲೂಕಿನ ಮುನಿಯೂರು ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಡಿ.ಮಂಜುನಾಥ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಈ ಹಿಂದಿನ ಅಧ್ಯಕ್ಷ ಬಿ.ಎಸ್.ಬಸವರಾಜು ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಿತು. 16 ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಎಂ.ಡಿ.ಮಂಜುನಾಥ್ ಒಬ್ಬರೆ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ತಹಸೀಲ್ದಾರ್ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನೂತನ ಅಧ್ಯಕ್ಷರ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರನ್ನು ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ನಾಗೇಶ್, ಮುಖಂಡರಾದ ಎಂ.ಡಿ.ಮೂರ್ತಿ, ಗೊಟ್ಟಿಕೆರೆ ಕಾಂತರಾಜು, ಮೈನ್ಸ್ ರಾಜಣ್ಣ, ನಂಜುಂಡಪ್ಪ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ರಾಧಾಕಿರಣ್, ಸದಸ್ಯರಾದ ಲಿಂಗರಾಜು, ಬಸವರಾಜು, ಲಕ್ಷ್ಮೀ, ಮೂರ್ತಯ್ಯ, ಪರಮೇಶ್, ಲಕ್ಷ್ಮೀಲವಕುಮಾರ್ ಸೇರಿದಂತೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
