ಮಧುಗಿರಿ
ಇತ್ತೀಚೆಗೆ ಶೃಂಗೇರಿಯಲ್ಲಿ ಜಗದ್ಗುರು ಶಂಕರಾಚಾರ್ಯರ ಪ್ರತಿಮೆಗೆ ಅಗೌರವ ತೋರಿರುವ ವ್ಯಕ್ತಿಯ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ, ಶಂಕರ ಸೇವಾ ಸಮಿತಿ ವತಿಯಿಂದ ಸೋಮವಾರ ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಮಿತಿ ಅಧ್ಯಕ್ಷ ಬಿ.ಆರ್ ಸತ್ಯನಾರಾಯಣ ಮಾತನಾಡಿ, ಈ ಕೃತ್ಯವೆಸಗಿರುವ ದುಷ್ಕರ್ಮಿಗೆ ಕಾನೂನು ರೀತಿ ಕ್ರಮ ಕೈಗೊಂಡು, ಕಠಿಣ ಶಿಕ್ಷೆ ನೀಡಬೇಕೆಂದು ಹಾಗೂ ಪ್ರತಿಮೆಗೆ ಸೂಕ್ತ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಕೆ.ನಾರಾಯಣ್, ಚಿ.ಸೂ.ಕೃಷ್ಣಮೂರ್ತಿ, ಕೆ.ಲಕ್ಷ್ಮೀ ಪ್ರಸಾದ್, ಡಿ.ವಿ ಶೇಷಾದ್ರಿ, ಎಂ.ಎನ್.ನಾಗಭೂಷಣ್, ಕೆ.ಎಸ್.ರಾಮಚಂದ್ರರಾವ್, ಶ್ರೀನಿವಾಸ್, ಬಡಕನಹಳ್ಳಿ ರಾಘವೇಂದ್ರ ಮುಂತಾದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ