ಬೆಂಗಳೂರು
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, 2018-19ರ ಅವಧಿಯಲ್ಲಿ 4400 ಕೋಟಿ ಮೊತ್ತದಲ್ಲಿ 10 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿಂದು ಹೇಳಿದ್ದಾರೆ.
ಬರ ಪರಿಸ್ಥಿತಿ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಯೋಜನೆಯಡಿ ಗ್ರಾಮೀಣಾ ಭಾಗದಲ್ಲಿನ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಸಮಗ್ರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಈಗಾಗಲೇ 6.5 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ತಿಳಿಸಿದರು.
ಮನರೇಗಾ ಯೋಜನೆಯಡಿ ಕಾಲುವೆ ದುರಸ್ಥಿ , ಆಧುನೀಕರಣ, ಕೃಷಿಹೊಂಡ ನಿರ್ಮಾಣ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೃಷ್ಣಭೈರೇಗೌಡ ಮಾಹಿತಿ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








