ಕೊರೊನಾ ಚಿಕಿತ್ಸೆಗಾಗಿ ಖಾಲಿ ಸರ್ಕಾರಿ ಕಟ್ಟಡಗಳನ್ನು ಬಳಸಿ : ಹೆಚ್ ಡಿ ಕೆ

ಬೆಂಗಳೂರು

   ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮವಾಗಿದ್ದು, ಇತರರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ.

  ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು  ಬಳಸಿಕೊಳ್ಳಬೇಕು. ಸರ್ಕಾರ ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸೂಕ್ಷ್ಮತೆಯಿಂದ ವರ್ತಿಸಬೇಕು ಎಂದಿದ್ದಾರೆ.

   ಕೆಲ ಆಸ್ಪತ್ರೆಗಳಲ್ಲಿ ಕೊರೋನಕ್ಕಾಗಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ರಾಜ್ಯದಲ್ಲಿ ಹಲವುಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಇಂತಹ ಕೇಂದ್ರ ತರೆಯಬೇಕು. ಸೋಂಕಿತರ ರಕ್ತಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದು ಹೇಳಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

   ಸುರಕ್ಷತಾ ಕ್ರಮಗಳನ್ನು ವಿವರಿಸುವುದನ್ನು ಸರ್ಕಾರ ಪ್ರಚಾರಕ್ಕಾಗಿ ಬಳಸಿಕೊಳ್ಳಬಾರದು ಎಂದು ಕುಟಕಿದ ಅವರು, ದೂರವಾಣಿಪೋನ್‌ಗಳಲ್ಲಿ ಕೇಳಿಬರುತ್ತಿರುವ ಪ್ರಚಾರದಿಂದ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿಪರಿವರ್ತನೆಯಾಗಿ ಜನಜೀವನದ ಮೇಲೆ ನಕಾರಾತ್ಮಕ ಪರಿಣಾಮಗಳಾಗುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿ ಆತಂಕವ್ಯಕ್ತಪಡಿಸಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link