ಹಾವೇರಿ
ಪ್ರತಿಯೊಬ್ಬರು ಸ್ವಚ್ಛತೆ ಕಾಪಾಡಿಕೊಳ್ಳಬೇಕು, ವಯಕ್ತಿಕ ಶುಚಿತ್ವದಿಂದ ಆರೋಗ್ಯವಾಗಿರಬಹುದು. ಬಯಲಿನಲ್ಲಿ ಯಾರು ಬಹಿರ್ದೆಸೆಗೆ ಹೋಗಬಾರದು ಹಾಗೂ ಶೌಚಾಲಗಳನ್ನು ಉಪಯೋಗಿಸುವ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಶಾಸಕ ನೆಹರು ಓಲೇಕಾರ ಅವರು ಹೇಳಿದರು.
ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಾವೇರಿ ತಾಲೂಕು ಪಂಚಾಯತಿ ವತಿಯಿಂದ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯತಿ ಆವರಣದಲ್ಲಿ ಶೌಚಾಲಯ ಜಾಗೃತಿ ಸಾರೋಟಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಹಾಗೂ ಇದಕ್ಕೆ ಎಲ್ಲರೂ ಸ್ಪಂದಿಸಬೇಕು. ಶೌಚಾಲಯ ಬಳಕೆಯಿಂದ ಉತ್ತಮ ಆರೋಗ್ಯ, ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು ಎಂದು ಹೇಳಿದರು.
ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ತಾಲೂಕು ಪಂಚಾಯತಿ ಅಧ್ಯಕ್ಷ ಕರಿಯಲ್ಲಪ್ಪ ಉಂಡಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಈಟೇರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಗೋವಿಂದಸ್ವಾಮಿ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ವರ ಹುಬ್ಬಳ್ಳಿ ಇತರರು ಉಪಸ್ಥಿತರಿದ್ದರು.