ಸರ್ಕಾರದ ಯೋಜನೆಗಳ ಸಮರ್ಪಕ ಬಳಕೆಗೆ ಕರೆ

ಗುಬ್ಬಿ

      ಕೃಷಿ ಅಭ್ಯುದಯಕ್ಕೆ ರಾಜ್ಯ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪ್ರಸಕ್ತ ಬಜೆಟ್‍ನಲ್ಲಿ ಕೃಷಿ ಕ್ಷೇತ್ರಕ್ಕೆ 37 ಸಾವಿರ ಕೋಟಿ ರೂಗಳಷ್ಟು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ರೈತರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಪಥದತ್ತ ಸಾಗುವಂತೆ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಕರೆನೀಡಿದರು.

        ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಕೆ.ಡಬ್ಲ್ಯೂ.ಡಿ.ಪಿ-2, ಸುಜಲಾ-3 ಯೋಜನೆಯಡಿ ಭೂಸಂಪನ್ಮೂಲ ಮಾಹಿತಿ ಪಾಲುದಾರರ ತಾಲ್ಲೂಕು ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆಯ ಸುಜಲ-3 ಯೋಜನೆಯನ್ನು ತಾಲ್ಲೂಕಿನ 6 ಜಲಾನಯನ ಉಪ ಸಮಿತಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ತಾಲ್ಲೂಕಿನ 23 ಕಿರು ಜಲಾನಯನಗಳನ್ನೊಳಗೊಂಡಂತೆ ಸುಮಾರು 12,114,52 ಹೆಕ್ಟೇರ್ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

       ರೈತರ ಸರ್ವತೋಮುಖ ಆಬಿವೃದ್ಧಿಗಾಗಿ ಹಲವು ಮಹತ್ವದ ಯೋಜನೆಗಳನ್ನು ಕೃಷಿ ಇಲಾಖೆ ಮೂಲಕ ಅನುಷ್ಠಾನ ಗೊಳಿಸಲಾಗುತ್ತಿದೆ. ರೈತ ಸಮುದಾಯ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ತಿಳಿಸಿದ ಅವರು, ಕೃಷಿ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜಲಾನಯನ ಈ ಯೋಜನೆಯಡಿ ಭೂಸಂಪನ್ಮೂಲ, ಮಣ್ಣು ಹವಾಗುಣ, ಅಂತರ್ಜಲ, ಸಸ್ಯಸಂಪತ್ತು, ಮಾರುಕಟ್ಟೆ ಸೌಲಭ್ಯ ಮುಂತಾದವುಗಳನ್ನು ವೈಜ್ಞಾನಿಕ ವಿಧಾನದಲ್ಲಿ ಕೈಗೊಳ್ಳಲಾಗುತ್ತಿದೆ.

         ಕೃಷಿ ಹಾಗೂ ಜಲಾನಯನ ಅಭಿವೃದ್ಧಿ ಬೆಳೆ ಆಯ್ಕೆ, ಮಣ್ಣು ಮತ್ತು ನೀರು ಸಂರಕ್ಷಣಾ ವಿಧಾನಗಳ ಅನುಸರಣೆಗೆ ಮಾರ್ಗದರ್ಶನ ನೀಡುವ ಮೂಲಕ ರೈತರ ಆದಾಯವನ್ನು ಹೆಚ್ಚಳ ಮಾಡಲು ಅವಕಾಶಕಲ್ಪಿಸಲಾಗುತ್ತಿದೆ. ರೈತರು ಈ ಯೋಜನೆಯಡಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು ಸೇರಿದಂತೆ ಚೆಕ್ ಡ್ಯಾಂ ಗಳನ್ನು ನಿರ್ಮಿಸಿಕೊಂಡು ಅಂತರ್ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದು ಆರ್ಥಿಕವಾಗಿ ಪ್ರಗತಿ ಹೊಂದುವಂತೆ ತಿಳಿಸಿದರು.

        ರೈತರು ಬೆಳೆದ ಬೆಳೆಗಳಿಗೆ ಉತ್ತಮವಾದ ವೈಜ್ಞಾನಿಕ ಬೆಲೆ ನಿಗದಿಗೊಳಿಸುವುದರ ಜೊತೆಗೆ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಸಮಗ್ರವಾದ ಮಾಹಿತಿ ಮತ್ತು ಮಾರ್ಗದರ್ಶನಗಳನ್ನು ನೀಡಲಾಗುತ್ತದೆ. ಅಲ್ಲದೆ ಕೃಷಿ ಅಭಿವೃದ್ಧಿಗೆ ಪೂರಕವಾದ ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ವಿತರಣೆ ಮಾಡಲಾಗುತ್ತದೆ. ರೈತರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವಂತೆ ತಿಳಿಸಿದರು.ಇದೆ ಸಂದರ್ಭದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳಾದ ಪವರ್ ಟಿಲ್ಲರ್, ಡೀಸೆಲ್ ಪಂಪ್ ಸೆಟ್, ರೋಟೋವೇಟರ್, ಪೀಡ್ ಕಟರ್‍ಗಳನ್ನು ಸಚಿವರು ವಿತರಿಸಿದರು.

         ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಿ.ಹೆಚ್.ಜಗನ್ನಾಥ್, ಜಿ.ರಾಮಾಂಜಿನಯ್ಯ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ, ಜಿಲ್ಲಾ ಕೃಷಿ ನಿರ್ದೇಶಕ ಉಮೇಶ್, ಕೃಷಿ ವಿಜ್ಞಾನಿಗಳಾದ ಕಿರಣ್ ಕುಮಾರ್, ಶಿವರಾಜು, ನಾಗರಾಜು, ಸಹಾಯಕ ಕೃಷಿ ನಿರ್ದೇಶಕ ಕೆಂಪಚೌಡಪ್ಪ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ನಾಗೇಂದ್ರ, ಕೃಷಿ ಅಧಿಕಾರಿಗಳಾದ ಶಿವಣ್ಣ, ಜಗನ್ನಾಥ್ ಗೌಡ, ಶ್ರೀಕಂಠಪ್ಪ, ಬಸವರಾಜು, ಸಿದ್ದೇಶ್ ಮುಂತಾದವರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap