ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಲು ಕರೆ

ಚಿಕ್ಕನಾಯಕನಹಳ್ಳಿ
   
        ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ದೊಡ್ಡ ಆಸ್ತಿಯಾಗಬೇಕು ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಹೇಳಿದರು.ತಾಲ್ಲೂಕಿನ ಮೇಲನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಇಂದಿರಾಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಾಲಾ ಸಿಬ್ಬಂದಿ ಹಾಗೂ ಪೋಷಕರು ಪೂರಕ ವಾತಾವರಣ ನಿರ್ಮಾಣ ಮಾಡಬೇಕು ಎಂದರು.ಸಮಾರಂಭದಲ್ಲಿ ಹಳೆಯ ವಿದ್ಯಾರ್ಥಿಗಳು, ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಸನ್ಮಾನಿಸಲಾಯಿತು.
 
        ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಚೇತನಾಗಂಗಾಧರ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಮಂಜುಳಮ್ಮ, ಕಲ್ಲೇಶ್, ಹೊನ್ನೇಬಾಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲೋಕಮ್ಮ, ತೀರ್ಥಪುರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಗೌರಮ್ಮ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದ ಪ್ರಿನ್ಸಿಪಾಲ್ ಲೋಕೇಶ್ ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link