ಕುಂಭದ್ರೋಣ ಮಳೆಗೆ ನಲುಗಿದ ಉತ್ತರ ಕರ್ನಾಟಕ..!

ಬೆಂಗಳೂರು:

      ವಿಜಯಪುರ, ಕಲುಬುರಗಿ, ಕರಾವಳಿ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.ಉತ್ತರ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಸತತ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.

   ಅನೇಕ ಕಡೆ ಮನೆಗಳಿಗೆ ನೀರು ನುಗ್ಗಿ ಜನರು ಭಯಭೀತರಾಗಿದ್ದಾರೆ. ಕೆಲವರು ರಾತ್ರಿಯಿಡಿ ಜಾಗರಣೆ ಮಾಡಿದ್ದಾರೆ. ನೀರು ಹೊರಹಾಕಲು ಹೈರಾಣರಾಗಿದ್ದಾರೆ.

    ಮಳೆಯಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿನ ಕಬ್ಬು, ಸೋಯಾಬೀನ್, ಹತ್ತಿ, ಮೆಕ್ಕೆಜೋಳ ನೆಲ ಕಚ್ಚಿದ್ದು, ಕೆಲವು ಜಿಲ್ಲೆಗಳಲ್ಲಿ ಅಡಕೆ ಬೆಳೆಗೂ ಹಾನಿಯಾಗಿದೆ. ನೂರಾರು ಜನ ಮನೆ ಮಠ ಕಳೆದುಕೊಂಡು, ಅಕ್ಷರಶಃ ಬೀದಿಗೆ ಬಂದಿದ್ದಾರೆ. ಮಳೆ ಸಂತ್ರಸ್ತರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೆ ಧಾವಿಸಬೇಕಾಗಿದೆ.ಕೂಡಲೇ ಉತ್ತರಕರ್ನಾಟಕ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕಎಸ್.ಆರ್.ಪಾಟೀಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ವಿಜಯಪುರ, ಬಾಗಿಲುಕೋಟೆ, ಕಲುಬುರ್ಗಿ, ಬೀದರ್, ಯಾದಗಿರಿ, ರಾಯಚೂರಿನ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಜನತೆ ಎಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸದವತ್ತಿ, ಬೈಲಹೊಂಗಲ, ಚಿಕ್ಕೋಡಿ, ಅಥಣಿಯಲ್ಲಿ ಭಾರೀ ಮಳೆಯಾಗಿದ್ದು, ಸಾವಿರಾರುಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಸೋಯಾಬೀನ್, ಹತ್ತಿ, ಮೆಕ್ಕೆಜೋಳ ಮಳೆಯಿಂದ ಹಾನಿಯಾಗಿದ್ದು, ರೈತರು ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಹ ಧಾರುಣ ಪರಿಸ್ಥಿತಿ ಎದುರಾಗಿದೆ. 

   ಈ ನಡುವೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link