ಬೆಂಗಳೂರು
ಸರಿಯಾದ ಚಿಕಿತ್ಸೆ ನೀಡಿಲ್ಲ ಎಂದು ನಿವೃತ್ತ ಸರ್ಕಾರಿ ಹೋಮಿಯೋಪಥಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿಯ ಪಾಪರೆಡ್ಡಿಪಾಳ್ಯದಲ್ಲಿ ನಡೆದಿದೆ.
ಹೋಮಿಯೋಪಥಿ ವೈದ್ಯ ವಿಜಯ್ ಕುಮಾರ್ ಬಾಯ್ನಾಕ್ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.ಸರ್ಕಾರಿ ಹೋಮಿಯೋಪಥಿ ವೈದ್ಯರಾಗಿದ್ದ ವಿಜಯ್ ಕುಮಾರ್, ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್. ಚತುರ್ವೇದಿ ಅವರಿಗೆ ಪರ್ಸನಲ್ ಹೋಮಿಯೋಪಥಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ನಂತರ ನಾಗರಭಾವಿ ಬಳಿಯ ಪಾಪರೆಡ್ಡಿಪಾಳ್ಯದಲ್ಲಿ ಹೋಮಿಯೋಪಥಿ ಕ್ಲಿನಿಕ್ ತೆರೆದು ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ.
ಕಳೆದ ಮಾ.23ರಂದು ಇವರ ಕ್ಲಿನಿಕ್‍ಗೆ ಬಂದ ಸುರೇಶ್ ನಾಯ್ಕ್ ಡಸ್ಟ್ ಅಲರ್ಜಿಗೆ ನೀವು ಕೊಟ್ಟ ಚಿಕಿತ್ಸೆ ಸರಿಯಿಲ್ಲ ಎಂದು ಜಗಳ ಶುರು ಮಾಡಿದ್ದಾನೆ. ಅಲ್ಲದೆ ನನ್ನ ಹೆಂಡತಿಗೆ ಮಾಧ್ಯಮದವರೆಲ್ಲ ಗೊತ್ತು ನಮಗೆ ಒಂದೂವರೆ ಲಕ್ಷ ಹಣ ಕೊಟ್ಟರೆ ಸರಿ ಎಂದು ಬೇಡಿಕೆ ಇಟ್ಟಿದ್ದಾನೆ. ಈ ವೇಳೆ ಹಣ ನೀಡಲು ವೈದ್ಯ ವಿಜಯ್ ಕುಮಾರ್ ನಿರಾಕರಿಸಿದ್ದಕ್ಕೆ ಮುಖಕ್ಕೆ ಗುದ್ದಿ ಹಲ್ಲೆ ನಡೆಸಿ ಅಪಘಾತ ನಡೆಸಿ ಕೊಲ್ಲುವುದಾಗಿ ಬೆದರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
