ವಕೀಲರ ರಕ್ಷಣೆ ಕಾಯ್ದೆ ಜಾರಿಗೆ ಆಗ್ರಹ

0
10

ದಾವಣಗೆರೆ :

          ರಾಷ್ಟ್ರ ಮಟ್ಟದಲ್ಲಿ ವಕೀಲರ ರಕ್ಷಣೆ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ, ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ವಕೀಲರು ನ್ಯಾಯಾಲಯಗಳ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.ನಗರದ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ವಕೀಲರು ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

           ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎನ್.ಟಿ.ಮಂಜುನಾಥ್, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವಕೀಲ ಸಮುದಾಯವನ್ನು ಸಮಪೂರ್ಣವಾಗಿ ಕಡೆಗಣಿಸಿವೆ ಎಂದು ಆರೋಪಿಸಿದರು.ಕೇಂದ್ರ ಸರ್ಕಾರ ವಕೀಲರ ರಕ್ಷಣೆ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕು. ಹಾಗೂ ವಕೀಲರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಜೆಟ್‍ನಲ್ಲಿ ಸೂಕ್ತ ಅನುದಾನ ಮೀಸಲಿಡಬೇಕೆಂದು ಆಗ್ರಹಿಸಿದರು.

         ಪ್ರತಿಭಟನೆಯಲ್ಲಿ ಜಿಲ್ಲಾ ವಕೀಲರ ಸಂಘದ ಹೆಚ್.ದಿವಾಕರ್, ಲಿಂಗರಾಜ್, ಬಸವರಾಜ್, ಅನ್ನಪೂರ್ಣಮ್ಮ, ಎಲ್.ಹೆಚ್.ಅರುಣಕುಮಾರ್, ಸದಾಶಿವ, ಎ.ಎನ್.ಹೆಗಡೆ, ಎನ್.ಶಿವಲಿಂಗಪ, ಲೋಕಿಕೆರೆ ಸಿದ್ದಪ್ಪ, ಮನೋಜ್, ಶ್ಯಾಮ್ ಮತ್ತಿತರರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here