ವಲಸೆ ತಪ್ಪಿಸಲು ರೋಜಗಾರ್ ವಾಹಿನಿಯಿಂದ ಪ್ರಚಾರ

 ಹಾವೇರಿ :

    ಬರ ಪರಸ್ಥಿತಿ ಹಾಗೂ ಇತರೆ ನೈಸರ್ಗಿಕ ವಿಪತ್ತುಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ತಾಲೂಕಿನ 33 ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ಸ್ಥಳದಲ್ಲಿಯೇ ಉದ್ಯೋಗ ನೀಡಲು, ಈ ಕುರಿತು ಜನರಿಗೆ ಆರಿವು ಮೂಡಿಸಲು ರೋಜಗಾರ ವಾಹಿನಿಯ ಮೂಲಕ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.

    ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಸಂಪೂರ್ಣ ಮಾಹಿತಿ ನೀಡುವುದು ಕೂಲಿಕಾರರ ಕೂಲಿ ಬೇಡಿಕೆ, ಹೊಸ ಉದ್ಯೋಗ ಚೀಟಿ ಬೇಡಿಕೆ ಮತ್ತು ವೈಯಕ್ತಿಕ ಕಾಮಗಾರಿಗಳ ಬೇಡಿಕೆಯನ್ನು ರೋಜಗಾರ ವಾಹಿನಿ ಮುಖ್ಯ ಉದ್ದೇಶವಾಗಿರುತ್ತದೆ ಎಂದು ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಪತ್ರಿಕೆಗೆ ತಿಳಿಸಿದ್ದಾರೆ.

    ಮುಂದುವರೆದು ಸ್ವಚ್ಛ ಭಾರತ ಮಿಷನ್ ಅಡಿ ಸ್ವಚ್ಛಮೇವ ಜಯತೆ ಕಾರ್ಯಕ್ರಮವನ್ನು ಜೂನ್ 11 ರಿಂದ ಜುಲೈ 11ರ ವರೆಗೆ ತಾಲೂಕಿನಾದ್ಯಂತಹ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಚ ವಾತಾವರಣ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮ, ಸ್ವಚ್ಚಥಾ ರಥ ಯಾತ್ರೆ, ಪ್ರಬಂದ, ಚರ್ಚಾ ಸ್ಪರ್ಧೆ, ಶ್ರಮದಾನ, ಜಾಗೃತಿ ಜಾಥಾ, ಗೋಡೆ ಬರಹ,ಕರಪತ್ರ, ಬ್ಯಾನರ ಅಭಿಯಾನದ ಜೊತೆಗೆ ಮತ್ತುನರೇಗಾ ಯೋಜನೆಯ ರೋಜಗಾರ ವಾಹಿನಿಯಲ್ಲಿ ಪ್ರತಿ ಗ್ರಾಮಕ್ಕೆ ಭೇಟಿ ನಿಡುವುದರೊಂದಿಗೆ ಘನ ತ್ಯಾಜ್ಯ ನಿರ್ವಹಣೆ ವಿಧಾನಗಳು, ಹಸಿ ಕಸ, ಒಣ ಕಸ ವಿಂಗಡಣೆ, ಎರಡು ಶೌಚ ಗುಂಡಿಯ ನಿರ್ಮಾಣ, ಉಪಯೋಗ ಮತ್ತು ಎಲ್.ಓ.ಬಿ.ಯಡಿ ಶೌಚಾಲಯ ನಿರ್ಮಾಣ ಮಾಡುವುದು, ಸ್ವಚ್ಛ ಭಾರತ ಮಿಷನ್(ಗ್ರಾಮೀಣ) ಯೋಜನೆಯಡಿ ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ, ಬಳಕೆ, ಶಾಲಾ ಮತ್ತು ಅಂಗನವಾಡಿ ಶೌಚಾಲಯಗಳನ್ನು ಉಪಯೋಗ ಮಾಡಲು ವಿದ್ಯಾರ್ಥಿಗಳಲ್ಲಿ ಹಾಗೂ ಶಿಕ್ಷಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕಾರ್ಯಕ್ರಮದ ಮಾಹಿತಿಯನ್ನು ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link