ವಾಲ್ಮೀಕಿ ಭವನ ಪೊಲೀಸ್ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

ಬಳ್ಳಾರಿ

   ಬಳ್ಳಾರಿಯ ನಲ್ಲಚೆರವು ಪ್ರದೇಶದಲ್ಲಿರುವ ವಾಲ್ಮೀಕಿ ಭವನವನ್ನು ಪೊಲೀಸ್ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದೆ. ಸದ್ಯಕ್ಕೆ 50 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ,ಎಎಸ್ಪಿ ಬಿ.ಎನ್.ಲಾವಣ್ಯ ಅವರು ಸೋಮವಾರ ಪರಿಶೀಲನೆ ನಡೆಸಿದರು.

   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕೋರಿಕೆಯ ಮೇರೆಗೆ ಜಿಲ್ಲಾಡಳಿತ ಈ ವ್ಯವಸ್ಥೆ ಮಾಡಿದ್ದು,ಸದ್ಯ 50 ಬೆಡ್‍ಗಳು ಹಾಗೂ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಹಂತಹಂತವಾಗಿ ಪರಿಸ್ಥಿತಿ ನೋಡಿಕೊಂಡು ಬೆಡ್‍ಗಳ ಸಂಖ್ಯೆ ಹೆಚ್ಚಳ ಮಾಡುವ ಚಿಂತನೆ ಜಿಲ್ಲಾಡಳಿತದ್ದಾಗಿದೆ.
ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿ ನಕುಲ್ ಅವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಇನ್ನೀತರೆ ಇಲಾಖೆ ಅಧಿಕಾರಿಗಳ ವರ್ಗದಲ್ಲಿ ಕೊರೊನಾ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕೋವಿಡ್ ಕೇರ್ ಸೆಂಟರ್ ನಿರ್ಮಿಸಲಾಗಿದೆ.

   ಈ ಕೇರ್ ಸೆಂಟರ್ ವಿಶೇಷವಾಗಿ ಪೊಲೀಸ್ ಸಿಬ್ಬಂದಿಗಾಗಿಯೇ ಸ್ಥಾಪಿಸಲಾಗಿದೆ. ಮೊದಲನೇ ಆದ್ಯತೆ ಪೊಲೀಸರಿಗೆ ನೀಡಲಾಗುತ್ತದೆ. ಎರಡನೇಯದಾಗಿ ಇನ್ನೀತರೆ ಅಧಿಕಾರ ವರ್ಗಕ್ಕೆ ಮೀಸಲಿರಿಸಲಾಗಿದೆ ಎಂದರು.ಎಸ್ಪಿ ಸಿ.ಕೆ.ಬಾಬಾ ಅವರು ಮಾತನಾಡಿ, ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಇದುವರೆಗೆ 1801 ಜನರಿಗೆ ತಪಾಸಣೆ ನಡೆಸಲಾಗಿದ್ದು, 296 ಜನರಿಗೆ ಕೋವಿಡ್ ಸೊಂಕಿರುವುದು ದೃಢಪಟ್ಟಿದೆ ಎಂದರು.
ಈ ಸಂದರ್ಭದಲ್ಲಿ ಎಎಸ್ಪಿ ಬಿ.ಎನ್.ಲಾವಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link