ವಾಲ್ಮೀಕಿ ಸಮಾಜದ ಪೂರ್ವಭಾವಿ ಸಭೆ

ಹರಪನಹಳ್ಳಿ:

       ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8-9ರಂದು ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ನಿಮಿತ್ತ ಪಟ್ಟಣದ ಅರಸೀಕೆರೆ ರಸ್ತೆಯ ಬಳಿಯಿರುವ ವಾಲ್ಮೀಕಿ ಸಮುದಾಯ ಭವನದಲ್ಲಿ ವಾಲ್ಮೀಕಿ ಸಮಾಜ ಬಾಂಧವರ ಪೂರ್ವಭಾವಿ ಸಭೆ ನಡೆಯಿತು.

        ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು, `ರಾಜ್ಯದ 14 ಜಿಲ್ಲೆಗಳ 81 ತಾಲ್ಲೂಕುಗಳಲ್ಲಿ ಪ್ರವಾಸ ಕೈಗೊಂಡು ವಾಲ್ಮೀಕಿ ಜಾತ್ರಾ ಮಹೋತ್ಸವ ಕುರಿತು ಸಮಾಜ ಬಾಂಧವರಲ್ಲಿ ಜಾಗೃತಿ ಮೂಡಿಸಲಾಗಿದೆ. ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನೆರವೇರಲು ಎಲ್ಲರೂ ಕೈ ಜೋಡಿಸಲು ತಿಳಿಸಲಾಗಿದೆ’ ಎಂದು ಹೇಳಿದರು.

       ರಾಜ್ಯದಲ್ಲಿ 50-60 ಲಕ್ಷ ಜನಸಂಖ್ಯೆ ಹೊಂದಿರುವ ವಾಲ್ಮೀಕಿ ನಾಯಕ ಸಮುದಾಯಕ್ಕೆ ಕೇಂದ್ರದ ಮಾದರಿಯಲ್ಲಿ ರಾಜ್ಯದಲ್ಲಿಯೂ 7.5 ಮೀಸಲಾತಿ, ಪರಿಶಿಷ್ಟ ಜಾತಿ, ಪಂಗಡದವರಿಗೆ ಉದ್ಯೋಗದಲ್ಲಿ ಮುಂಬಡ್ತಿ ನೀಡುವಂತೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ನಿರ್ಣಯಕ್ಕೆ ಬಾರದೇ ಸಮಾಜದ ಅಭಿವೃದ್ಧಿ ವಿಷಯದಲ್ಲಿ ನಿರ್ಲಕ್ಷ್ಯ ತಾಳುತ್ತಿರುವುದು ಖಂಡನೀಯ. ಪೀಠದಲ್ಲಿ ನಡೆಯುವ ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶಿಸಿ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಲಾಗುವುದು’ ಎಂದು ಹೇಳಿದರು.

       ವಾಲ್ಮೀಕಿ ಜಾತ್ರಾ ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಎಚ್.ಕೆ.ಹಾಲೇಶ್ ಮಾತನಾಡಿ, ಹರಪನಹಳ್ಳಿ ತಾಲ್ಲೂಕಿನ ಬಹುಸಂಖ್ಯಾತ ಸಮಾಜವಾಗಿರುವ ವಾಲ್ಮೀಕಿನಾಯಕ ಸಮಾಜ, ರಾಜನಹಳ್ಳಿ ಶ್ರೀಗಳ ಮಾರ್ಗದರ್ಶನದಲ್ಲಿ ಮುಖ್ಯವಾಹಿನಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಸಮಾಜ ಬಾಂಧವರನ್ನು ಒಗ್ಗೂಡಿಸಲಾಗವುದು. ಜಾತ್ರೆಯಲ್ಲಿ ತಾಲ್ಲೂಕಿನ ಜನತೆ ಸಮವಸ್ತ್ರದೊಂದಿಗೆ ಭಾಗವಹಿಸಲು ತಿಳಿಸಲಾಗುವುದು’ ಎಂದರು.

        ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ನಿಚ್ಚವನಹಳ್ಳಿ ಕೆ.ಪರಶುರಾಮಪ್ಪ, ಮುಖಂಡರಾದ ಕವಲಹಳ್ಳಿ ಭರಮಪ್ಪ, ಶಿರಹಟ್ಟಿ ದಂಡೆಪ್ಪ, ಕಂಭಟ್ರಹಳ್ಳಿ ಅಣ್ಣಪ್ಪ, ಕೆ.ಉಚ್ಚೆಂಗೆಪ್ಪ, ಟಿ.ಮನೋಜ, ಮೈದೂರು ಮಾರುತಿ, ಬಾನಹಳ್ಳಿ ಕೆಂಚನಗೌಡರ, ಪೂಜಾರ ಮಾರುತಿ, ಪಿ.ವೆಂಕಟೇಶ್ ಸೇರಿದಂತೆ ಇತರರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap