ವಾಸುದೇವ್ ಮಯ್ಯ ಆತ್ಮಹತ್ಯೆ ತನಿಖೆ ಪ್ರಗತಿಯಲ್ಲಿದೆ : ಗೃಹ ಸಚಿವ

ಬೆಂಗಳೂರು

    ನಗರದ ಬಸವಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ ಮಾಜಿ ಸಿಇಓ ವಾಸುದೇವ ಮಯ್ಯ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

    ಸೋಮವಾರ ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ ವಾಸುದೇವ ಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ಅಸ್ವಾಭಾವಿಕ ಸಾವು ಎಂದು ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಯಾಂಶ ಹೊರ ಬರಬರಲಿದೆ ಎಂದು ತಿಳಿಸಿದರು.ಬ್ಯಾಂಕಿನ ಹಣಕಾಸು ಅವ್ಯವಹಾರದ ಪ್ರಕರಣವನ್ನು ನ್ಯಾಯಾಲಯದ ಆದೇಶದಂತೆ ಸಿಐಡಿ ತನಿಖೆಗೆ ವಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.

   ಶ್ರೀ ಗುರು ರಾಘವೇಂದ್ರ ಬ್ಯಾಂಕಿನ ಕೇಂದ್ರ ಕಚೇರಿ ಸೇರಿ ಐದು ಕಡೆ ಎಸಿಬಿ ಮಾಡಿತ್ತು. ಈ ವೇಳೆ ಬ್ಯಾಂಕ್ ಅಧಿಕಾರಿಗಳು ತೆರೆದಿದ್ದಾರೆನ್ನಲಾದ ನಕಲಿ ಖಾತೆಗಳಿಗೆ ಸಂಬಂಧಿಸಿದ ದಾಖಲೆ, ಬ್ಯಾಂಕ್ ನೀಡಿದ ಸಾಲದ ವಿವರ, ವಸೂಲಾಗದ ಸಾಲದ ದಾಖಲೆ, ಬ್ಯಾಂಕ್‍ನ ಕಂಪ್ಯೂಟರ್ ಡೇಟಾ ವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

   ಅವ್ಯವಹಾರದಲ್ಲಿ ವಜಾಗೊಂಡಿರುವ ಆಡಳಿತ ಮಂಡಳಿ ಕೈವಾಡವಿದ್ದು, ಅಗತ್ಯ ಭದ್ರತೆ ಪಡೆಯದೆ 27 ಮಂದಿಗೆ 921 ಕೋಟಿ ರೂ. ಸಾಲ ನೀಡಿರುವುದು ಆರ್‍ಬಿಐ ಮತ್ತು ಸಹಕಾರ ಸಂಘಗಳ ರಿಜಿಸ್ಟ್ರಾರ್ ವಿಚಾರಣೆ ಹಾಗೂ ಎಸಿಬಿ ತನಿಖೆಯಿಂದ ಬೆಳೆಕಿಗೆ ಬಂದಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link